Mangaluru : ಬಾವುಟಗುಡ್ಡೆಯಲ್ಲಿ ದಕ್ಷಿಣ ಕನ್ನಡದ ಅತಿ ದೊಡ್ಡ ಧ್ವಜ ಸ್ತಂಭ ನಿರ್ಮಾಣ – ದಿನೇಶ್ ಗುಂಡೂರಾವ್ ಮಾಹಿತಿ

Mangaluru : ಮಂಗಳೂರಿನ ಬಾವುಟಗುಡ್ಡೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಅತೀ ದೊಡ್ಡ ಧ್ವಜಸ್ತಂಭವನ್ನು ನಿರ್ಮಾಣ ಮಾಡಲಾಗುವುದು ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದರು.

ಸ್ವಾತಂತ್ರ್ಯ ಹೋರಾಟಗಾರ ಸಮರ ವೀರ ಕೆದಂಬಾಡಿ ರಾಮಯ್ಯ ಗೌಡರ ಮುಂದಾಳತ್ವದಲ್ಲಿ ನಡೆದ ಅಮರ ಸುಳ್ಯ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಗೆದ್ದು ಮಂಗಳೂರಿನ ಬಾವುಟ ಗುಡ್ಡೆಯಲ್ಲಿ ವಿಜಯ ಧ್ವಜ ಹಾರಿಸಿ, 13 ದಿನಗಳ ಕಾಲ ಆಡಳಿತ ನಡೆಸಿದ ಸಂಸ್ಮರಣಾ ದಿನಾಚರಣೆಯ ಅಂಗವಾಗಿ ತುಳುನಾಡ ಅಮರ ಸುಳ್ಯ ಸಮರ 1837 ಸಂಸ್ಮರಣೆ ಸಲುವಾಗಿ ನಗರದ ಬಾವುಟಗುಡ್ಡೆಯ ಸಮರ ವೀರ ಕೆದಂಬಾಡಿ ರಾಮಯ್ಯ ಗೌಡರ ಪ್ರತಿಮೆಯ ಮುಂಭಾಗ ಶನಿವಾರ ಹುತಾತ್ಮರಿಗೆ ಗೌರವ ವಂದನೆ ಸಲ್ಲಿಸಿ ಅವರು ಮಾತನಾಡಿದ ಸಚಿವರು ಬಾವುಟ ಗುಡ್ಡೆಯಲ್ಲಿ ಸುಮಾರು 100 ಅಡಿಗೂ ಹೆಚ್ಚಿನ ಎತ್ತರದ ಧ್ವಜಸ್ತಂಭ ನಿರ್ಮಾಣ ಮಾಡುವ ಮೂಲಕ ದೇಶಪ್ರೇಮ ಪ್ರೇರೇಪಿಸುವ ಕೆಲಸ ಮಾಡುತ್ತೇವೆ

Comments are closed.