2nd Puc Result 2025: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ಉಡುಪಿ ಪ್ರಥಮ, ಯಾದಗಿರಿ ಕೊನೆಯ ಸ್ಥಾನ!

2nd Puc Result 2025: ಇಂದು ಮಧ್ಯಾಹ್ನ 12.30 ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶವನ್ನು ಶಿಕ್ಷಣ ಸಚಿವ ಮಧು ಬಂಗಾರಪ್ಪ ಪತ್ರಿಕಾಗೋಷ್ಠಿ ಮೂಲಕ ಬಿಡುಗಡೆ ಮಾಡಿದ್ದಾರೆ. 1.30 ರ ನಂತರ ಶಿಕ್ಷಣ ಇಲಾಖೆ ವೆಬ್‌ಸೈಟ್‌ಗಳಲ್ಲಿ ಫಲಿತಾಂಶ ವೀಕ್ಷಿಸಬಹುದು.

ದ್ವಿತೀಯ ಪಿಯು ಫಲಿತಾಂಶದಲ್ಲಿ ಉಡುಪಿ ಜಿಲ್ಲೆ ಪ್ರಥಮ ಸ್ಥಾನ ಪಡೆದುಕೊಂಡಿದೆ. ಉಡುಪಿ ಜಿಲ್ಲೆಗೆ 93.90 ರಷ್ಟು ಫಲಿತಾಂಶ ಲಭಿಸಿದೆ.
ದಕ್ಷಿಣ ಕನ್ನಡ ಎರಡನೇ ಸ್ಥಾನ ಪಡೆದುಕೊಂಡಿದೆ. 93.57 ರಷ್ಟು ಫಲಿತಾಂಶ ಬಂದಿದೆ. ಶೇ.48.45 ರಷ್ಟು ಫಲಿತಾಂಶ ಪಡೆದು ಯಾದಗಿರಿ ಜಿಲ್ಲೆ ಕೊನೆಯ ಸ್ಥಾನ ಪಡೆದುಕೊಂಡಿದೆ.

ವಾಣಿಜ್ಯ, ವಿಜ್ಞಾನ ವಿಭಾಗ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ದ.ಕ. ಜಿಲ್ಲೆಯ ವಿದ್ಯಾರ್ಥಿಗಳು!

ವಾಣಿಜ್ಯ ವಿಭಾಗದಲ್ಲಿ ದೀಪಶ್ರೀ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಕೆನರಾ ಪಿಯು ಕಾಲೇಜಿನ ವಿದ್ಯಾರ್ಥಿನಿ. 600 ಅಂಕಗಳಿಗೆ 599 ಅಂಕ.

ಕಾಮರ್ಸ್‌ ವಿಭಾಗದಲ್ಲಿ ಭಾರ್ಗವಿ ರಾಜ್ಯಕ್ಕೆ ಮೂರನೇ ಸ್ಥಾನ ಪಡೆದಿದ್ದಾರೆ. ಪೌರೋಹಿತ್ಯ ವೃತ್ತಿ ಮಾಡುತ್ತಿರುವವರ ಮಗಳು. ಕೋಲಾರ ತಾಲೂಕಿನ ಹುದುಕುಳ ಗ್ರಾಮದ ವಿದ್ಯಾರ್ಥಿನಿ

ವಿಜ್ಞಾನ ವಿಭಾಗದಲ್ಲಿ ಅಮೂಲ್ಯ ಕಾಮತ್‌ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ದಕ್ಷಿಣ ಕನ್ನಡದ ಎಕ್ಸ್‌ಪರ್ಟ್‌ ಪಿಯು ಕಾಲೇಜಿನ ವಿದ್ಯಾರ್ಥಿನಿ.

ಕಲಾ ವಿಭಾಗದಲ್ಲಿ ಸಂಜನಾ ಬಾಯಿ ಪ್ರಥಮ. ಬಳ್ಳಾರಿ ಮೂಲದ ಸಂಜನಾ ಬಾಯಿ 600 ರಲ್ಲಿ 597 ಅಂಕ ಗಳಿಸಿದ್ದಾರೆ. ಬಳ್ಳಾರಿ ಜಿಲ್ಲೆಯ INDU INDP PU ಕಾಲೇಜಿನ ವಿದ್ಯಾರ್ಥಿನಿ.

ಬಳ್ಳಾರಿಯ ನಿರ್ಮಲಾಗೆ 596 ಅಂಕ ಪಡೆದುಕೊಂಡು ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ.

ಸಂಜನಾ ಬಾಯಿ
ಅಮೂಲ್ಯ ಕಾಮತ್‌

 

 

ನಿರ್ಮಲಾ

 

ಫಲಿತಾಂಶ ವೀಕ್ಷಿಸುವುದು ಹೇಗೆ?
ಅಧಿಕೃತ ವೆಬ್‌ಸೈಟ್‌ಗೆ karresults.nic.in ಅಥವಾ kseab.karnataka.gov.in ಗೆ ಭೇಟಿ ನೀಡಬೇಕು.
Second PU Results 2025 ಲಿಂಕ್ ಕ್ಲಿಕ್ ಮಾಡಬೇಕು.
ರಿಜಿಸ್ಟ್ರೇಷನ್ ನಂಬರ್ (ನೋಂದಣಿ ಸಂಖ್ಯೆ) ಮತ್ತು ಪಾಸ್‌ವರ್ಡ್ ನಮೂದಿಸಿ
Second PU Results 2025 ಎಂಬುದು ಸ್ಕ್ರೀನ್​ನಲ್ಲಿ ಕಾಣಿಸುತ್ತದೆ.

Comments are closed.