Bengaluru: ಬೆಂಗಳೂರು ಏರ್ಪೋರ್ಟ್ ನಲ್ಲಿ ಜೂ. ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ಅರ್ಜಿ ಆಹ್ವಾನ!!

Bengaluru: ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರವು ಜ್ಯೂನಿಯರ್ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಪದವೀಧರ ಅಭ್ಯರ್ಥಿಗಳು ಆನ್ಲೈನ್ ಮುಖೇನ ಎಪ್ರಿಲ್ 25 ರೊಳಗೆ ಅರ್ಜಿ ಸಲ್ಲಿಸಬಹುದು.

ಮುನ್ನೂರ ಒಂಭತ್ತು ಹುದ್ದೆಗಳು ಖಾಲಿ ಇದ್ದು, ಅಧಿಕೃತ ಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಿಂದ ಪದವಿ ಪೂರ್ಣಗೊಳಿಸಿರಬೇಕು.
ಅಭ್ಯರ್ಥಿಯ ಗರಿಷ್ಠ ವಯಸ್ಸು ಇಪ್ಪತ್ತೇಳು ಆಗಿರಬೇಕು. ಅಪ್ರೆಂಟಿಸ್ ತರಬೇತಿ ಪಡೆದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇರಲಿದೆ. ಇತರ ಅಭ್ಯರ್ಥಿಗಳಿಗೆ ಒಂದು ಸಾವಿರ ಅರ್ಜಿ ಶುಲ್ಕ ಇರಲಿದೆ. ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ನಲ್ವತ್ತು ಸಾವಿರ ವೇತನ ಇರಲಿದೆ.
Comments are closed.