Udupi: ಉಡುಪಿ ಶ್ರೀಕೃಷ್ಣ ಮಠದ ರಥ ಬೀದಿಯಲ್ಲಿ ಪ್ರಿ ವೆಡ್ಡಿಂಗ್‌, ಪೋಸ್ಟ್‌ ವೆಡ್ಡಿಂಗ್‌, ಫೋಟೋ ಶೂಟ್‌ ನಿಷೇಧ!

Share the Article

Udupi: ಉಡುಪಿ ಶ್ರೀಕೃಷ್ಣ ಮಠದ ರಥ ಬೀದಿಯಲ್ಲಿ ಪ್ರಿ ವೆಡ್ಡಿಂಗ್‌, ಪೋಸ್ಟ್‌ ವೆಡ್ಡಿಂಗ್‌, ಫೋಟೋ ಶೂಟ್‌ ನಿಷೇಧ ಮಾಡಲಾಗಿದೆ. ಪರ್ಯಾಯ ಪುತ್ತಿಗೆ ಮಠ ಈ ಕುರಿತು ಪ್ರಕಟಣೆ ಹೊರಡಿಸಿದೆ.

ಫೋಟೋಶೂಟ್‌ನಿಂದ ಸ್ವಾಮೀಜಿಗಳ ಓಡಾಟಕ್ಕೆ ಹಾಗೂ ಮುಂಜಾನೆ ಮುಜುಗರದ ಸನ್ನಿವೇಶ ಸೃಷ್ಟಿಯಾಗುವುದರಿಂದ ಇದನ್ನು ತಪ್ಪಿಸಲು ಮಠ ಈ ನಿರ್ಧಾರ ಮಾಡಿದೆ.

ಪ್ರಿವೆಡ್ಡಿಂಗ್‌, ಪೋಸ್ಟ್‌ ವೆಡ್ಡಿಂಗ್‌ ಫೋಟೋ ಶೂಟ್‌ ಹೆಸರಿನಲ್ಲಿ ಶ್ರೀ ಕೃಷ್ಣಮಠದ ಆವರಣದಲ್ಲಿ ಅಸಭ್ಯ ವರ್ತನೆ ಕಾಣುತ್ತದೆ. ಫೋಟೋಶೂಟ್‌ ಹೆಸರಲ್ಲಿ ಮಠದ ರಥಬೀದಿಯಲ್ಲಿ ಸರಸ ಸಲ್ಲಾಪ ನಡೆಯುತ್ತಿದೆ. ಕೇರಳ, ಬೆಂಗಳೂರು ಈ ಕಡೆಗಳಿಂದ ಬರುವ ಫೋಟೋಗ್ರಾಫರ್ಸ್‌ ಹಾವಳಿ ಹೆಚ್ಚಿದೆ. ಈ ಎಲ್ಲಾ ಕಾರಣದಿಂದ ಫೋಟೋಶೂಟ್‌ ನಿಷೇಧ ಮಾಡಲಾಗಿದೆ.

ಅಷ್ಟಮಠಾಧೀಶರು ಓಡಾಡುವ ರಥಬೀದಿ, ನೂರಾರು ವರ್ಷಗಳಿಂದ ಯತಿಗಳು, ದಾಸರು ನಡೆದಾಡುವ ಪವಿತ್ರ ಜಾಗ, ಇದಕ್ಕೆ ಪಾವಿತ್ರ್ಯತೆ ಇದೆ. ದೇವರ ಉತ್ಸವ ನಡೆಯುವ ಜಾಗ, ಇಂತಹ ಪವಿತ್ರ ಸ್ಥಳಗಳಲ್ಲಿ ಫೋಟೋಶೂಟ್‌, ಜೋಡಿಗಳ ಸರಸ ಸರಿಯಲ್ಲ. ಮುಜುಗರದ ಸನ್ನಿವೇಶ ತಪ್ಪಿಸಲು ಮಠ ಈ ನಿರ್ಧಾರ ಕೈಗೊಂಡಿರುವ ಕುರಿತು ಕನ್ನಡ ದುನಿಯಾ ಮಾಧ್ಯಮ ಪ್ರಕಟ ಮಾಡಿದೆ.

Comments are closed.