Bengaluru: ಹುದ್ದೆಗಳ ನೇಮಕಾತಿಗಾಗಿ ಹೊಸದಾಗಿ ಅಧಿಸೂಚನೆ ಹೊರಡಿಸಬಾರದೆಂದು ರಾಜ್ಯ ಸರ್ಕಾರ ಖಡಕ್ ಸಂದೇಶ

Bengaluru: ರಾಜ್ಯ ಸಿವಿಲ್‌ ಸೇವೆಗಳಲ್ಲಿನ ಮೀಸಲಾತಿ ಅನ್ವಯವಾಗುವ ವೃಂದಗಳಲ್ಲಿನ ಹುದ್ದೆಗಳ ನೇಮಕಾತಿಗಾಗಿ ಹೊಸದಾಗಿ ಅಧಿಸೂಚನೆಯನ್ನು ಹೊರಡಿಸಬಾರದೆಂದು ರಾಜ್ಯ ಸರ್ಕಾರ ಖಡಕ್ ಸಂದೇಶ ರವಾನಿಸಲಾಗಿದೆ.

ನವೆಂಬರ್ 28, 2024ರ ನಂತರ ನೇರನೇಮಕಾತಿಗಾಗಿ ಅಥವಾ ಬ್ಯಾಕ್ ಲಾಗ್ ಹುದ್ದೆಗಳ ಭರ್ತಿಗಾಗಿ ಯಾವುದೇ ಹೊಸ ಅಧಿಸೂಚನೆಯನ್ನು ಹೊರಡಿಸಿದ್ದಲ್ಲಿ ಈ ತಕ್ಷಣದಿಂದ ಜಾರಿಗೆ ಬರುವಂತೆ ರದ್ದು ಪಡಿಸಲು ಆಯಾಯ ನೇಮಕಾತಿ ಪ್ರಾಧಿಕಾರಗಳಿಗೆ ಸೂಚನೆ ನೀಡಲಾಗಿದೆ. ಅಲ್ಲದೇ ಹೊಸದಾಗಿ ಯಾವುದೇ ಅಧಿಸೂಚನೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೂ ಹೊರಡಿಸಬಾರದೆಂದು ಸೂಚಿಸಲಾಗಿರುತ್ತದೆ. ಮುಂದುವರೆದು ದಿನಾಂಕ 29.03.2025ರ ಸುತ್ತೋಲೆಯಲ್ಲಿ ದಿನಾಂಕ 25.11.2024ರ ನಂತರ ಹೊರಡಿಸಿರುವ ಅಧಿಸೂಚನೆಗಳನ್ನು ಕೂಡಲೇ ಹಿಂಪಡೆಯುವಂತೆ ಸೂಚಿಸಲಾಗಿರುತ್ತದೆ.

Comments are closed.