Tamilunadu : ವಿದ್ಯಾರ್ಥಿಗಳಿಗೆ ‘ಜೈ ಶ್ರೀರಾಮ್’ ಘೋಷಣೆ ಕೂಗಿ ಎಂದ ತಮಿಳುನಾಡು ರಾಜ್ಯಪಾಲ

Tamilunadu : ಇಂಜಿನಿಯರಿಂಗ್ ಕಾಲೇಜಿನ ಕಾರ್ಯಕ್ರಮ ಒಂದರಲ್ಲಿ ಭಾಗವಹಿಸಿದ್ದ ತಮಿಳುನಾಡಿನ ರಾಜ್ಯಪಾಲರು ಅಲ್ಲಿನ ವಿದ್ಯಾರ್ಥಿಗಳಿಗೆ ಜೈ ಶ್ರೀ ರಾಮ್ ಘೋಷಣೆ ಕೂಗಿ ಎಂದು ಸೂಚಿಸಿದ್ದಾರೆ. ಈ ಕುರಿತಾದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಹೌದು, ಮಧುರೈನ ಎಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ತಮಿಳುನಾಡಿನ ರಾಜ್ಯಪಾಲ (Tamil Nadu) ಆರ್.ಎನ್.ರವಿ (RN Ravi) ಅವರು ವಿದ್ಯಾರ್ಥಿಗಳು ಜೈ ಶ್ರೀರಾಮ್ ಎಂದು ಜಪಿಸುವಂತೆ ಹೇಳಿದ್ದು ವಿವಾದಕ್ಕೆ ಕಾರಣವಾಗಿದೆ.

ಮಧುರೈನ ಸರ್ಕಾರಿ ಅನುದಾನಿತ ಕಾಲೇಜಿನಿಂದ ಸಾಹಿತ್ಯ ಸ್ಪರ್ಧೆಯಲ್ಲಿ ವಿಜೇತರಿಗೆ ಬಹುಮಾನಗಳನ್ನು ವಿತರಿಸಲು ಮುಖ್ಯ ಅತಿಥಿಯಾಗಿ ತಮಿಳುನಾಡು ರಾಜ್ಯಪಾಲರನ್ನು ಆಹ್ವಾನಿಸಲಾಗಿತ್ತು. ಈ ವೇಳೆ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಭಗವಾನ್ ರಾಮನಿಗೆ ಗೌರವ ಸಲ್ಲಿಸುವಂತೆ ಸಭಿಕರನ್ನು ಕೇಳಿಕೊಂಡರು. “ನಾನು ಹೇಳುತ್ತೇನೆ, ಮತ್ತು ನೀವು ಜೈ ಶ್ರೀ ರಾಮ್ ಎಂದು ಹೇಳುತ್ತೀರಿ” ಎಂದು ಅವರು ಸಭೆಯನ್ನುದ್ದೇಶಿಸಿ ಹೇಳಿದರು. ವಿದ್ಯಾರ್ಥಿಗಳು ಜೈ ಶ್ರೀರಾಮ್‌ ಎಂದು ಘೋಷಣೆಗಳನ್ನು ಕೂಗಿದ್ದಾರೆ. ಅವರು ವಿದ್ಯಾರ್ಥಿಗಳಿಗೆ ನಿರ್ದೇಶಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ರಾಜ್ಯಪಾಲ ರವಿ ಅವರ ಹೇಳಿಕೆಗಳು ಆಡಳಿತಾರೂಢ ಡಿಎಂಕೆ ವಿರೋಧ ವ್ಯಕ್ತಪಡಿಸಿದೆ. ಡಿಎಂಕೆ ರಾಜ್ಯಪಾಲರನ್ನು ಆರ್‌ಎಸ್‌ಎಸ್ ವಕ್ತಾರ ಎಂದು ಕರೆದಿದೆ. ಇದು ದೇಶದ ಜಾತ್ಯತೀತ ಮೌಲ್ಯಗಳಿಗೆ ವಿರುದ್ಧವಾಗಿದೆ ಇಂದು ಆಕ್ರೋಶ ವ್ಯಕ್ತಪಡಿಸಿದೆ.

Comments are closed.