Karnataka Gvt: ರಾಜ್ಯ ಸರ್ಕಾರಿ ನೌಕರರೇ ಗಮನಿಸಿ – ಪ್ರತಿ ವರ್ಷ ಆಸ್ತಿ ವಿವರ ಸಲ್ಲಿಕೆ ಕಡ್ಡಾಯ!!

Share the Article

Karnataka Gvt: ಪ್ರತಿ ವರ್ಷ ಸರ್ಕಾರಿ ನೌಕರರು ಆಸ್ತಿ ವಿವರ ಸಲ್ಲಿಸುವುದು ಕಡ್ಡಾಯವಾಗಿದೆ ಎಂದು ರಾಜ್ಯ ಸರ್ಕಾರವು ಮಹತ್ವದ ಆದೇಶವನ್ನು ಹೊರಡಿಸಿದೆ.

ಹೌದು, ಸರ್ಕಾರಿ ನೌಕರರ ವಿರುದ್ಧ ಭ್ರಷ್ಟಾಚಾರ ಆರೋಪಗಳು ಹೆಚ್ಚಾಗುತ್ತಿವೆ. ಎಲ್ಲಾ ನೌಕರರೂ ಚರಾಸ್ತಿ-ಸ್ಥಿರಾಸ್ತಿಗಳನ್ನು ವೆಬ್‌ಸೈಟ್‌ನಲ್ಲಿ ಘೋಷಿಸಬೇಕು ಎಂದು ಲೋಕಾಯುಕ್ತ ಹೇಳಿತ್ತು. ಆದರೆ, ಇದಕ್ಕೆ ಸರ್ಕಾರಿ ನೌಕರರಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು. ಈ ಹೊತ್ತಲ್ಲಿ ಸರ್ಕಾರ ಜಾಣನಡೆ ಅನುಸರಿಸಿದ್ದು, ಪ್ರತಿಯೊಬ್ಬ ಸರ್ಕಾರಿ ನೌಕರರು ಸರ್ಕಾರಿ ಸೇವೆಗೆ ಸೇರುವಾಗ ಹಾಗೂ ಪ್ರತಿ ವರ್ಷ ನೌಕರರ ಹಾಗೂ ಕುಟುಂಬದ ಆಸ್ತಿ ವಿವರ ಸಲ್ಲಿಸೋದು ಕಡ್ಡಾಯವಾಗಿದೆ ಎಂದು ಹೇಳಿದೆ.

ಅಲ್ಲದೆ ಲೋಕಾಯಕ್ತದವರು ಯಾವ ಅಧಿಕಾರಿಗಳ ಬಗ್ಗೆ ಆಸ್ತಿ ವಿವರ ಕೇಳುತ್ತಾರೋ ವಿಳಂಬವಿಲ್ಲದೇ ಲೋಕಾಯುಕ್ತಕ್ಕೆ ಸಲ್ಲಿಸಬೇಕು ಎಂದು ಆದೇಶ ಹೊರಡಿಸಿದೆ. ಜೊತೆಗೆ ಈ ಸೂಚನೆಗಳನ್ನು ಪಾಲಿಸದಿದ್ದರೆ ಇಲಾಖಾ ಮುಖ್ಯಸ್ಥರು ಹಾಗೂ ಸಕ್ಷಮ ಪ್ರಾಧಿಕಾರದ ಅಧಿಕಾರಿಗಳನ್ನು ನೇರ ಹೊಣೆಗಾರರನ್ನಾಗಿ ಮಾಡಲಾಗುತ್ತೆ ಅಂತಾ ಸರ್ಕಾರ ಎಚ್ಚರಿಕೆ ನೀಡಿದೆ.

Comments are closed.