Ramalinga Reddy: ಆಟೋ, ಕ್ಯಾಬ್ ಚಾಲಕರಿಗೆ ಸಿಹಿ ಸುದ್ದಿ!

Ramalinga Reddy: ಕರ್ನಾಟಕದಲ್ಲಿ ರ್ಯಾಪಿಡೋ, ಉಬರ್ ಬೈಕ್ ಟ್ಯಾಕ್ಸಿ ಸೇವೆಯನ್ನು ಸ್ಥಗಿತಗೊಳಿಸುವಂತೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಆದೇಶ ಹೊರಡಿಸಿದ್ದಾರೆ. ಈ ಕುರಿತು ಸಾರಿಗೆ ಇಲಾಖೆಯ ಕಾರ್ಯದರ್ಶಿ ಮತ್ತು ಸಾರಿಗೆ ಇಲಾಖೆಯ ಆಯುಕ್ತರಿಗೆ ಪತ್ರ ಬರೆಯಲಾಗಿದ್ದು, ಹೈಕೋರ್ಟ್ ಆದೇಶ ಪಾಲಿಸುವಂತೆ ಸೂಚನೆ ನೀಡಲಾಗಿರುವ ಕುರಿತು ಟಿವಿ9 ವರದಿ ಮಾಡಿದೆ.

ಉಬರ್ ಇಂಡಿಯಾ ಸಿಸ್ಟಮ್ಸ್ ಪ್ರೈವೇಟ್ ಲಿಮಿಟೆಡ್, ಎಎನ್‌ಐ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್ ಮತ್ತು ಇತರರು ಮೋಟಾರ್ ಸೈಕಲ್‌ಗಳನ್ನು ಸಾರಿಗೆ ವಾಹನಗಳಾಗಿ ನೋಂದಾಯಿಸಲು 2022 ರಲ್ಲಿ ಸಲ್ಲಿಸಿದ ಅರ್ಜಿಗಳನ್ನು ಪರಿಗಣಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ್ದರು. ಏಪ್ರಿಲ್ – 2 ರಂದು ಆರು ವಾರದೊಳಗೆ ಬೈಕ್ ಟ್ಯಾಕ್ಸಿ ನಿಲ್ಲಿಸುವಂತೆ ಹೈಕೋರ್ಟ್ ಆದೇಶ ನೀಡಿತ್ತು.
1988 ರ ಮೋಟಾರು ವಾಹನ ಕಾಯ್ದೆಯ ಸೆಕ್ಷನ್ 93 ರ ಅಡಿಯಲ್ಲಿ ಅಗತ್ಯ ನಿಯಮಗಳೊಂದಿಗೆ ಸಂಬಂಧಿತ ಮಾರ್ಗಸೂಚಿಗಳನ್ನು ತಿಳಿಸದ ಹೊರತು ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಕಾರ್ಯನಿರ್ವಹಿಸಲು ಸಾಧ್ಯವಿಲ್ಲ. ನ್ಯಾಯಾಲಯ ರಾಜ್ಯ ಸರ್ಕಾರ ಮತ್ತು ಸಾರಿಗೆ ಇಲಾಖೆಗೆ ಆರು ವಾರಗಳ ಒಳಗೆ ಎಲ್ಲಾ ಬೈಕ್ ಟ್ಯಾಕ್ಸಿ ಕಾರ್ಯಾಚರಣೆಗಳು ಸ್ಥಗಿತಗೊಳ್ಳುವಂತೆ ನೋಡಿಕೊಳ್ಳಲು ನಿರ್ದೇಶನ ನೀಡಿತ್ತು ಎಂದು ಟಿವಿ9 ವರದಿ ಮಾಡಿದೆ.
Comments are closed.