Home News China : ಪಾಕಿಸ್ತಾನಕ್ಕೆ ಬೆಂಬಲ ಘೋಷಿಸಿದ ಚೀನಾ!!

China : ಪಾಕಿಸ್ತಾನಕ್ಕೆ ಬೆಂಬಲ ಘೋಷಿಸಿದ ಚೀನಾ!!

Hindu neighbor gifts plot of land

Hindu neighbour gifts land to Muslim journalist

China: : ಪಹಲ್ಗಾಮ್ ದಾಳಿ ಬಳಿಕ ಭಾರತವು ಪಾಕಿಸ್ತಾನಕ್ಕೆ ತಕ್ಕ ಪಾಠ ಕಲಿಸಲು ಸಜ್ಜಾಗಿದೆ. ಈಗಾಗಲೇ ಪಾಕ್ ಗೆ ಭಾರತವು ಕೆಲವು ಮಾಸ್ಟರ್ ಸ್ಟ್ರೋಕ್ ಗಳನ್ನು ನೀಡಿದೆ. ಈ ಬೆನ್ನಲ್ಲೇ ಇಂಡಿಯಾ ಮತ್ತು ಪ್ಯಾಕ್ ಯುದ್ಧ ಆಗುವುದು ಪಕ್ಕ ಎಂದು ವಿಶ್ಲೇಷಿಸಲಾಗುತ್ತಿದ್ದು ಯುದ್ಧ ನಡೆಯುವಂತಹ ಕಾರ್ಮೋಡಗಳು ಕವಿದಿವೆ. ಈಗಾಗಲೇ ಅಮೆರಿಕ ಮತ್ತು ಇಸ್ರೇಲ್ ಯುದ್ಧ ವಿಮಾನಗಳು ಭಾರತಕ್ಕೆ ಬಂದು ಇಳಿದಿವೆ. ಇದು ಇನ್ನೂ ಕುತೂಹಲವನ್ನು ಕೆರಳಿಸಿದೆ. ಆದರೆ ಈ ಬೆನ್ನಲ್ಲೇ ಪಾಕಿಸ್ತಾನಕ್ಕೆ ಚೀನಾ ಬೆಂಬಲ ಘೋಷಿಸಿದೆ.

ಹೌದು, ಯುದ್ಧದ ಭೀತಿ ಎದುರಾಗಿರುವ ಬೆನ್ನಲ್ಲೇ ಪಕ್ಕದ ರಾಷ್ಟ್ರ ಚೀನಾ ಪಾಕಿಸ್ತಾನಕ್ಕೆ ಬೆಂಬಲ ನೀಡಿದೆ. ಭಾರತ ಮತ್ತು ಪಾಕಿಸ್ತಾನ ಎರಡೂ ಸಂಯಮವನ್ನು ಕಾಯ್ದುಕೊಳ್ಳಬೇಕು ಮತ್ತು ಶಾಂತಿಗೆ ಆದ್ಯತೆ ನೀಡಬೇಕು ಎಂದು ಒತ್ತಾಯಿಸಿದೆ. ಭಾನುವಾರ ಪಾಕಿಸ್ತಾನದ ವಿದೇಶಾಂಗ ಸಚಿವ ಇಶಾಕ್ ದಾರ್ ಜೊತೆ ದೂರವಾಣಿ ಸಂಭಾಷಣೆಯ ಸಂದರ್ಭದಲ್ಲಿ ಚೀನಾದ ವಿದೇಶಾಂಗ ಸಚಿವ ವಾಂಗ್ ಯಿ ಉದ್ವಿಗ್ನತೆಯನ್ನು ಕಡಿಮೆ ಮಾಡಲು ಸಲಹೆ ನೀಡಿದ್ದಾರೆ ಎನ್ನಲಾಗಿದೆ.

ಅಲ್ಲದೆ ಚೀನಾದ ವಿದೇಶಾಂಗ ಸಚಿವಾಲಯದ ವಾಂಗ್ ಯಿ ಪಾಕಿಸ್ತಾನಕ್ಕೆ, ವಿಶೇಷವಾಗಿ ಅದರ ಸಾರ್ವಭೌಮತ್ವ ಮತ್ತು ಭದ್ರತಾ ಹಿತಾಸಕ್ತಿಗಳನ್ನು ಕಾಪಾಡುವಲ್ಲಿ ಚೀನಾದ ದೀರ್ಘಕಾಲದ ಬೆಂಬಲ ನೀಡುವುದಾಗಿ ಸ್ಪಷ್ಟಪಡಿಸಿದರು. ಚೀನಾ ಯಾವಾಗಲೂ ಪಾಕಿಸ್ತಾನವನ್ನು ತನ್ನ ದೃಢವಾದ ಭಯೋತ್ಪಾದನಾ ವಿರೋಧಿ ಕ್ರಮಗಳಲ್ಲಿ ಬೆಂಬಲಿಸಿದೆ ಮತ್ತು ಪಾಕಿಸ್ತಾನದ ಸಮಂಜಸವಾದ ಭದ್ರತಾ ಕಾಳಜಿಗಳನ್ನು ಸಂಪೂರ್ಣವಾಗಿ ಅರ್ಥಮಾಡಿಕೊಂಡಿದೆ ಎಂದು ಹೇಳಿದರು.