Puttur: ವೈದ್ಯಾಧಿಕಾರಿ ಮೇಲೆ ಹಲ್ಲೆ ಪ್ರಕರಣ; ಪ್ರತಿಭಟನಾಕಾರರ ವಿರುದ್ಧ ಪ್ರಕರಣ ದಾಖಲು!

Puttur: ವೈದ್ಯಾಧಿಕಾರಿ ಮೇಲೆ ಹಲ್ಲೆ ಖಂಡಿಸಿ ಆರೋಪಿಯನ್ನು ಬಂಧಿಸುವಂತೆ ನಡೆದ ಪ್ರತಿಭಟನೆಯಲ್ಲಿ ರಸ್ತೆ ತಡೆ ನಡೆಸಿದ ಹಿನ್ನೆಲೆ ಪ್ರಕರಣ ದಾಖಲಾಗಿರುವ ಕುರಿತು ವರದಿಯಾಗಿದೆ.

ಇಲಾಖಾ ಅಧಿಕಾರಿಗಳು ರಸ್ತೆ ತಡೆಯಬೇಡಿ ಎಂದು ಸೂಚಿಸಿದರೂ ಆರೋಪಿಗಳನ್ನು ದಸ್ತಗಿರಿ ಮಾಡಿ ಸೂಕ್ತ ಕಾನೂನು ಕ್ರಮ ಜರುಗಿಸುವುದಾಗಿ ಭರವಸೆ ನೀಡಿದರೂ ಪೊಲೀಸರು ಮಾತನ್ನು ಕೇಳದೆ ಪ್ರತಿಭಟನಾಕಾರರು 1 ಗಂಟೆಗಳ ಕಾಲ ರಸ್ತೆಯನ್ನು ತಡೆದು ಸಾರ್ವಜನಿಕರ ಸಂಚಾರಕ್ಕೆ ತೊಂದರೆ ಮಾಡಿದ್ದು ಮಾತ್ರವಲ್ಲದೇ, ಸಮವಸ್ತ್ರದಲ್ಲಿ ಕರ್ತವ್ಯದಲ್ಲಿದ್ದ ಪೊಲೀಸರನ್ನು ತಳ್ಳಿಕೊಂಡು ಸಮವಸ್ತ್ರಕ್ಕೆ ಕೈ ಹಾಕಿ ಕರ್ತವ್ಯ ನಿವಹಿಸಲು ಅಡ್ಡಿಪಡಿಸಿದ್ದಾರೆ ಎಂದು ಕೇಸು ದಾಖಲಾಗಿರುವ ಕುರಿತು ವರದಿಯಾಗಿದೆ.
Comments are closed.