Home latest ಡಿ.ಕೆ.ಸುರೇಶ್ ಪತ್ನಿ ಎಂದು ಹೇಳಿ ವಿಡಿಯೋ ಹರಿಬಿಟ್ಟ ಮಹಿಳೆ, ಗಲಿಬಿಲಿಗೊಂಡ ಸಂಸದ

ಡಿ.ಕೆ.ಸುರೇಶ್ ಪತ್ನಿ ಎಂದು ಹೇಳಿ ವಿಡಿಯೋ ಹರಿಬಿಟ್ಟ ಮಹಿಳೆ, ಗಲಿಬಿಲಿಗೊಂಡ ಸಂಸದ

Hindu neighbor gifts plot of land

Hindu neighbour gifts land to Muslim journalist

ರಾಮನಗರ: ತಾನು ಮಾಜಿ ಸಂಸದ ಡಿ.ಕೆ.ಸುರೇಶ್ ಪತ್ನಿ ಎಂದು ಹೇಳಿಕೊಂಡು ಮಹಿಳೆಯೊಬ್ಬರು ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೊ ಹರಿಬಿಟ್ಟಿದ್ದಾರೆ. ಡಿ.ಕೆ. ಸುರೇಶ್ ಪರ ವಕೀಲ ಪ್ರದೀಪ್ ಎಂಬುವರು ರಾಮನಗರದ ಸಿಇಎನ್ ಪೊಲೀಸ್ ಠಾಣೆಗೆ ಈ ಮಹಿಳೆಯ ವಿರುದ್ಧ ದೂರು ನೀಡಿದ್ದು, ಈಗ ಪ್ರಕರಣ ದಾಖಲಾಗಿದೆ.

pavitrah256 ಎಂಬ ಇನ್‌ಸ್ಟಾಗ್ರಾಮ್‌ನಲ್ಲಿ PavitraDksuresh Dodalahalli 22 ಹೆಸರಿನಲ್ಲಿ ಖಾತೆ ಹೊಂದಿರುವ ಈ ಮಹಿಳೆ, ಏ.8ರಂದು ವಿಡಿಯೊ ಪೋಸ್ಟ್ ಮಾಡಿದ್ದಾರೆ.

ಸುರೇಶ್ ಅವರ ಚಿತ್ರದೊಂದಿಗೆ ತನ್ನ ಚಿತ್ರ ಜೋಡಿಸಿ ಎಡಿಟ್ ಮಾಡಿದ ಚಿತ್ರವನ್ನು ಸಹ ಹಾಕಿಕೊಂಡಿದ್ದಾರೆ ಎಂದು ಪತಿ ಹೆಸರಿನ ಮುಂದೆ ಡಿ.ಕೆ. ಸುರೇಶ್ ಎಂದಿರುವ ಆಕೆ ಈ ಸಂಬಂಧ ಮತದಾರರ ಗುರುತಿನ ಚೀಟಿಯನ್ನು ಕೂಡಾ ಮಾಡಿದ್ದಾರೆ ಎನ್ನಲಾಗಿದೆ.

ವಿಡಿಯೊದಲ್ಲೇನಿದೆ?: ‘ನಾನು ಮೊದಲು ಡಿ.ಕೆ. ಸುರೇಶ್ ಅವರ

ಹೆಂಡತಿಯಾಗಿ ಹೇಳಬೇಕೆಂದರೆ, ನಾನು ಫಸ್ಟ್ ಸುರೇಶ್ ರ ಅಭಿಮಾನಿ. ಯಾಕೆಂದರೆ ಅವರು ಮೂರು ಸಲ ಎಂ.ಪಿ.ಯಾಗಿ ಯಾರೂ ಮಾಡಲಿಕ್ಕಾಗದ ಒಳ್ಳೆಯ ಕೆಲಸಗಳನ್ನು ಮಾಡಿದ್ದಾರೆ. ಇಂತಹವರನ್ನು ನನ್ನ ಗಂಡ ಎಂದು ಹೇಳಿಕೊಳ್ಳಲು ಖುಷಿಪಡುತ್ತೇನೆ’ ಎಂದು ಆಕೆ ವಿಡಿಯೊದಲ್ಲಿ ಹೇಳಿದ್ದಾರೆ.

ಸುರೇಶ್ ಅವರ ಪತ್ನಿ ಎಂದು ದುರುದ್ದೇಶದಿಂದ ಹೇಳಿಕೊಂಡು ಅಪಪ್ರಚಾರ ನಡೆಸುತ್ತಿರುವ ಮಹಿಳೆ, ಸಾರ್ವಜನಿಕವಾಗಿ ತಪ್ಪು ಸಂದೇಶ ಹರಡುತ್ತಿದ್ದಾರೆ. ಜತೆಗೆ ಕಾಂಗ್ರೆಸ್ ಪಕ್ಷದ ಚಿಹ್ನೆ ಕೂಡಾ ದುರುಪಯೋಗಪಡಿಸಿಕೊಂಡಿದ್ದಾರೆ. ಆಕೆಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ವಕೀಲ ಪ್ರದೀಪ್ ತಿಳಿಸಿದ್ದಾರೆ. ಸಾರ್ವಜನಿಕವಾಗಿ ಕಿಡಿಗೇಡಿತನಕ್ಕೆ ಕಾರಣವಾಗುವ ಹೇಳಿಕೆ) ಕಲಂ ಅಡಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.