Sports news: ಗೆಲುವಿನ ಬೆನ್ನಲ್ಲೇ ಶ್ರೇಯಸ್ ಅಯ್ಯರ್ಗೆ 12 ಲಕ್ಷ ರೂ. ದಂಡ ವಿಧಿಸಿದ ಬಿಸಿಸಿಐ!

Sports news: ಪಂಜಾಬ್ ಕಿಂಗ್ಸ್ ತಂಡದ ನಾಯಕ ಶ್ರೇಯಸ್ ಅಯ್ಯರ್ ನಿಗದಿತ ಸಮಯದೊಳಗೆ 20 ಓವರ್ಗಳನ್ನು ಪೂರ್ಣಗೊಳಿಸದ ಕಾರಣ ಅಯ್ಯರ್ ಅವರಿಗೆ 12 ಲಕ್ಷ ರೂ. ದಂಡ ವಿಧಿಸಲಾಗಿದೆ.

ಐಪಿಎಲ್ ನಿಯಮದ ಪ್ರಕಾರ, ಪ್ರತಿ ತಂಡಗಳು 20 ಓವರ್ಗಳನ್ನು 1 ಗಂಟೆ 30 ನಿಮಿಷಗಳಲ್ಲಿ ಪೂರ್ಣಗೊಳಿಸಬೇಕು. ಈ ಸಮಯದೊಳಗೆ 20 ಓವರ್ಗಳನ್ನು ಪೂರ್ಣಗೊಳಿಸದಿದ್ದರೆ ಆಯಾ ತಂಡಗಳ ನಾಯಕನಿಗೆ ಬಿಸಿಸಿಐ ತಲಾ 12 ಲಕ್ಷ ರೂ. ದಂಡ ವಿಧಿಸುತ್ತದೆ. ಹೀಗೆ ಚೆನ್ನೈನ ಚೆಪಾಕ್ ಸ್ಟೇಡಿಯಂನಲ್ಲಿ ನಡೆದ ಚೆನ್ನೈ ಸೂಪರ್ ಕಿಂಗ್ಸ್ ತಂಡದ ವಿರುದ್ಧದ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡದ ನಾಯಕ ಶ್ರೇಯಸ್ ಅಯ್ಯರ್ ಅವರು ನಿಗದಿತ ಸಮಯದೊಳಗೆ 20 ಓವರ್ಗಳನ್ನು ಪೂರ್ಣಗೊಳಿಸದ ಕಾರಣ ದಂಡ ವಿಧಿಸಲಾಗಿದೆ.
Comments are closed.