Mangaluru: ಸುಹಾಸ್ ಶೆಟ್ಟಿ ಹತ್ಯೆ ಸುಳಿವು ಮೊದಲೇ ಪೊಲೀಸರಿಗಿತ್ತು- ಸುನೀಲ್ ಕುಮಾರ್

Mangaluru: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಾರ್ಕಳ ಶಾಸಕ ಸುನೀಲ್ ಕುಮಾರ್ ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದು, ಅತೀಯಾದ ಮುಸ್ಲಿಮರ ಓಲೈಕೆಯಿಂದ ರಾಜ್ಯದಲ್ಲಿ ಈ ರೀತಿಯ ಘಟನೆಗಳು ಮರುಕಳಿಸುತ್ತದೆ ಎಂದು ಹೇಳಿದ್ದಾರೆ.

ಸುಹಾಸ್ ಶೆಟ್ಟಿ ಹತ್ಯೆ ಕುರಿತು ಮಾಹಿತಿ ಪೊಲೀಸರಿಗೆ ಮೊದಲೇ ಇತ್ತು ಎಂದು ಸುನೀಲ್ ಕುಮಾರ್ ಹೇಳಿದ್ದಾರೆ. ಮುಸಲ್ಮಾನರ ಸೋಶಿಯಲ್ ಮೀಡಿಯಾದಲ್ಲಿ ಹತ್ಯೆಯ ಸಂದೇಶ ಹರಿದಾಡಿತ್ತು. ಪೊಲೀಸರಿಗೆ ಮೊದಲೇ ಗೊತ್ತಿದ್ದರೂ ಸುಮ್ಮನಾಗಿದ್ದಾರೆ ಎಂದು ಸುನೀಲ್ ಕುಮಾರ್ ಹೇಳಿದ್ದಾರೆ. ಶವದ ಮೇಲೆ ಕಾಂಗ್ರೆಸ್ ರಾಜಕಾರಣ ರಾಜ್ಯವನ್ನು ಈ ಪರಿಸ್ಥಿತಿಗೆ ತಂದು ನಿಲ್ಲಿಸಿದೆ ಎಂದು ಸುನೀಲ್ ಕುಮಾರ್ ಹೇಳಿದ್ದಾರೆ.
ಆರೋಪಿಗಳು ಪರಾರಿಯಾಗಲು ಮುಸಲ್ಮಾನ ಮಹಿಳೆಯರು ನೆರವು ನೀಡಿದ್ದಾರೆ. ಇದು ಆತಂಕಕಾರಿ ಘಟನೆ ಎಂದು ಸುನೀಲ್ ಕುಮಾರ್ ಹೇಳಿದ್ದಾರೆ.
Comments are closed.