Suhas Murder Case: ಸುಹಾಸ್‌ ಶೆಟ್ಟಿ ವಿರುದ್ಧ ರೌಡಿಶೀಟರ್‌ ತೆರೆಯಲು ಹೊರಡಿಸಿದ್ದ ಆದೇಶದ ಪ್ರತಿ ಬಿಡುಗಡೆ- ದಿನೇಶ್‌ ಗುಂಡುರಾವ್‌ ಹೇಳಿದ್ದೇನು?

Share the Article

Suhas Murder Case: ಸುಹಾಸ್‌ ಶೆಟ್ಟಿ ಮರ್ಡರ್‌ ವಿಷಯಕ್ಕೆ ಸಂಬಂಧಪಟ್ಟಂತೆ ಬಿಜೆಪಿ ಮತ್ತು ಕಾಂಗ್ರೆಸ್‌ ನಾಯಕರ ನಡುವೆ ವಾಕ್ಸಮರ ಮುಂದುವರಿದಿದೆ. ಬಿಜೆಪಿ ಫಾಜಿಲ್‌ ಕುಟುಂಬಕ್ಕೆ ನೀಡಿದ್ದ ಪರಿಹಾರದ ಹಣವನ್ನೇ ಸುಪಾರಿ ಕೊಲೆಗೆ ಬಳಕೆ ಮಾಡಲಾಗಿದೆ ಎಂದು ಆರೋಪಿಸಿದ್ದು, ಈ ಮಧ್ಯೆ, ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಆಗಿರುವ ದಿನೇಶ್‌ ಗುಂಡುರಾವ್‌ 2020 ರಲ್ಲಿ ಸುಹಾಸ್‌ ಶೆಟ್ಟಿ ರೌಡಿ ಶೀಟರ್‌ ತೆರೆಯಲು ಆದೇಶ ನೀಡಿದ ಪ್ರತಿಯನ್ನು ಬಿಡುಗಡೆ ಮಾಡಿದ್ದಾರೆ.

“ಅಮಾಯಕರ ತಲೆಯಲ್ಲಿ ಮತಾಂಧತೆಯ ಅಮಲು‌ ತುಂಬಿ ಕಂಡವರ ಮಕ್ಕಳನ್ನು ಬಾವಿಗೆ ತಳ್ಳುತ್ತಿರುವ BJP ನಾಯಕರ ಗಮನಕ್ಕೆ. ಇದು ಇತ್ತೀಚೆಗೆ ಹತ್ಯೆಯಾದ ಸುಹಾಶ್ ಶೆಟ್ಟಿ ವಿರುದ್ದ ರೌಡಿ ಶೀಟರ್ ತೆರೆಯಲು ಪೊಲೀಸ್ ಇಲಾಖೆ ನೀಡಿದ್ದ ಆದೇಶದ ಪ್ರತಿ”. ಎಂದು ಟ್ವೀಟ್‌ ಮಾಡಿದ್ದಾರೆ.

“#SuhasShetty ವಿರುದ್ಧ ರೌಡಿ ಶೀಟರ್ ಓಪನ್ ಆಗಿದ್ದು 2020 ರಲ್ಲಿ. ಆಗ ಅಧಿಕಾರದಲ್ಲಿದ್ದದ್ದು @BJP4India ಸರ್ಕಾರ. ಗೃಹ ಸಚಿವರಾಗಿದ್ದ ಪುಣ್ಯಾತ್ಮ @BSBommai. ಇಂದು ಸುಹಾಸ್‌ನನ್ನು‌ ಮಹಾತ್ಮ ಎಂದು ಬಿಂಬಿಸುತ್ತಿರುವ ಬಿಜೆಪಿಯವರು ಆಗ ಯಾಕೆ ಸುಹಾಸ್‌ನನ್ನು ರೌಡಿ ಪಟ್ಟಿಗೆ ಸೇರಿಸಿದ್ದರು.?”

ಕರಾವಳಿಯನ್ನು ಕೋಮು‌ ಪ್ರಯೋಗ ಶಾಲೆಯನ್ನಾಗಿ ಮಾಡಿಕೊಂಡಿರುವ ಬಿಜೆಪಿಯವರೇ ಕ್ರಿಮಿನಲ್‌ಗಳ ನಿಜವಾದ ಸೃಷ್ಟಿಕರ್ತರು. ಇವರು‌ ಅಧಿಕಾರದಲ್ಲಿದ್ದಾಗ ಕ್ರಿಮಿನಲ್‌ಗಳನ್ನು ಸೃಷ್ಟಿಸುತ್ತಾರೆ. ಅವರ ಮೇಲೆ ರೌಡಿ ಶೀಟರ್ ತೆರೆಯುತ್ತಾರೆ. ಹೆಣ ಬಿದ್ದ ಕೂಡಲೆ ಅದೇ ಕ್ರಿಮಿನಲ್‌ಗಳನ್ನು‌ ಮಹಾತ್ಮರಂತೆ ಬಿಂಬಿಸಿ ಹುತಾತ್ಮರನ್ನಾಗಿ‌ ಮಾಡುತ್ತಾರೆ.

ಸುಹಾಸ್ ಹತ್ಯೆ ನಂತರ ಕೂಗುಮಾರಿಗಳಂತೆ ಅರಚುತ್ತಿರುವ @BJP4Karnataka ನಾಯಕರ‌ ಯಾರ ಮಕ್ಕಳಾದರೂ ಧರ್ಮದ ಅಮಲಿನಲ್ಲಿ ಬೀದಿ‌ ಕಾಳಗ ಮಾಡುತ್ತಿದ್ದಾರೆಯೆ.? ಅಥವಾ ಧರ್ಮಕ್ಕಾಗಿ ಬಡಿದಾಡುತ್ತಿದ್ದಾರೆಯೆ.? ಬಿಜೆಪಿ ನಾಯಕರ‌ ಧರ್ಮಾಂಧತೆಗೆ‌ ಬೀದಿ ಹೆಣವಾಗುತ್ತಿರುವುದು ಬಡವರ ಮಕ್ಕಳು. ಇದು ಸತ್ಯವಲ್ಲವೆ.?

ಬಿಜೆಪಿಯವರ ‌ಕೆಟ್ಟ ರಾಜಕೀಯಕ್ಕೆ ಕರಾವಳಿಯಲ್ಲಿ ಎಷ್ಟೋ ಜನರ‌ ಬಲಿಯಾಗಿದೆ. ಎಷ್ಟೋ ಮನೆಗಳ‌‌ ದೀಪ ಆರಿ ಹೋಗಿದೆ. ಇಷ್ಟಾದರೂ ಇವರ ರಕ್ತದಾಹ ನಿಂತಿಲ್ಲ. ಕರಾವಳಿಯಲ್ಲಿ ಇನ್ನಷ್ಟು ಹೆಣ ಬೀಳಬೇಕು ಎನ್ನುವ ಉದ್ದೇಶದಿಂದ ‌ದುಷ್ಟ ರಾಜಕಾರಣ ಮಾಡುತ್ತಿದ್ದಾರೆ.

ದ.ಕನ್ನಡದ‌ ಜನ‌ ಪ್ರಜ್ಞಾವಂತಿಕೆಯ ಜೊತೆಗೆ ಸೂಕ್ಷ್ಮತೆಯನ್ನು ಅರಿತುಕೊಂಡವರು. ಇನ್ನಾದರೂ ಕರಾವಳಿಯ ಜನ ಬಿಜೆಪಿಯ ಹುನ್ನಾರ ಅರಿಯಬೇಕಿದೆ. ಇಲ್ಲದಿದ್ದರೆ‌ ಬಿಜೆಪಿಯವರ‌ ಕೆಟ್ಟ ರಾಜಕಾರಣಕ್ಕೆ ಜಿಲ್ಲೆಯ‌ ನೆಮ್ಮದಿಯೇ ಹಾಳಾಗಲಿದೆ.

Comments are closed.