Karkala: ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ; ಎನ್‌ಐಎ ತನಿಖೆಗೆ ಆಗ್ರಹಿಸಿ ದ.ಕ.ಉಡುಪಿ ಶಾಸಕರಿಂದ ರಾಜ್ಯಪಾಲರ ಭೇಟಿ!

Karkala: ಸುಹಾಸ್ ಶೆಟ್ಟಿ ಹತ್ಯೆಯ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ ವಹಿಸಬೇಕೆಂದು ಒತ್ತಾಯಿಸಿ ದಕ್ಷಿಣ ಕನ್ನಡ ಮತ್ತು ಉಡುಪಿ ಶಾಸಕರು ಮೇ 9 ರಂದು ರಾಜ್ಯಪಾಲರನ್ನು ಭೇಟಿ ಮಾಡಲಿದ್ದಾರೆ.

ರಾಷ್ಟ್ರೀಯ ತನಿಖಾ ಸಂಸ್ಥೆಯಂತಹ ಸಮಗ್ರ ತನಿಖೆಯಿಂದ ಮಾತ್ರ ಸಂಪೂರ್ಣ ಸತ್ಯ ಹೊರಬರಲು ಸಾಧ್ಯ. ಆದರೆ ಇಂತಹ ನಿರ್ಧಾರ ತೆಗೆದುಕೊಳ್ಳಲು ರಾಜ್ಯ ಸರಕಾರದಿಂದ ಹೆಚ್ಚಿನ ಇಚ್ಛಾಶಕ್ತಿ ಇಲ್ಲ ಎಂದು ತೋರುತ್ತದೆ. ಆದ್ದರಿಂದ ಎರಡೂ ಕರಾವಳಿ ಜಿಲ್ಲೆಗಳ ಶಾಸಕರು ಈ ವಿಷಯದಲ್ಲಿ ಮಧ್ಯಪ್ರವೇಶಿಸುವಂತೆ ರಾಜ್ಯಪಾಲರನ್ನು ಒತ್ತಾಯಿಸಲಿದ್ದಾರೆ ಎಂದು ಶಾಸಕ ಸುನಿಲ್ ಕುಮಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Comments are closed.