Praveen sood: ಸಿಬಿಐ ನಿರ್ದೇಶಕ ಪ್ರವೀಣ್ ಸೂದ್ ಅಧಿಕಾರವಧಿ 1 ವರ್ಷ ವಿಸ್ತರಣೆ!

Share the Article

Praveen sood: ಕೇಂದ್ರ ಸರ್ಕಾರ ಸಿಬಿಐ ನಿರ್ದೇಶಕ ಪ್ರವೀಣ್‌ ಸೂದ್ (Praveen sood) ಅವರ ಅಧಿಕಾರಾವಧಿಯನ್ನು ಒಂದು ವರ್ಷ ವಿಸ್ತರಣೆ ಮಾಡಿದೆ. ಈ ಬಗ್ಗೆ ಬುಧವಾರ ಅಧಿಕೃತ ಪ್ರಕಟಣೆ ಹೊರಡಿಸಿದ್ದು, ಆಯ್ಕೆ ಸಮಿತಿಯು ಒಮ್ಮತಕ್ಕೆ ಬಾರದ ಕಾರಣ ಈ ನಿರ್ಧಾರ ಕೈಗೊಳ್ಳಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಮತ್ತು ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನೊಳಗೊಂಡ ಆಯ್ಕೆ ಸಮಿತಿಯ ಸಭೆಯಲ್ಲಿ ಪ್ರವೀಣ್ ಸೂದ್ ಅವರ ಅಧಿಕಾರಾವಧಿಯನ್ನು ವಿಸ್ತರಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.

Comments are closed.