Suhas Shetty: ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ; NIAಗೆ ವಹಿಸಲು ರಾಜ್ಯಪಾಲರಿಗೆ ಬಿಜೆಪಿ ಮನವಿ!

BJP: ರಾಜ್ಯ ಬಿಜೆಪಿ ನಿಯೋಗ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ವಹಿಸುವಂತೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಮನವಿ ಸಲ್ಲಿಸಿದೆ. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ವಿಧಾನಸಭೆ ವಿಪಕ್ಷ ನಾಯಕ ಅಶೋಕ್, ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮತ್ತು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಬಿಜೆಪಿ ಶಾಸಕರು ರಾಜ್ಯಪಾಲರಿಗೆ ನಾಲ್ಕು ಪುಟ್ಳ ಲಿಖಿತ ರೂಪದಲ್ಲಿ ಮನವಿ ಮಾಡಿದ್ದಾರೆ.

ಮೇ 01 ರಂದು ಮಂಗಳೂರು ನಗರದ ಬಜ್ಪೆ ಬಳಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ಹತ್ಯೆ ಮಾಡಲಾಗಿತ್ತು. ಪ್ರಕರಣದ ಸಂಬಂಧ ಮಂಗಳೂರು ಪೊಲೀಸರು ಈಗಾಗಲೇ ಎಂಟು ಮಂದಿ ಆರೋಪಿಗಳನ್ನು ಬಂಧನ ಮಾಡಿದ್ದಾರೆ.
Comments are closed.