Home Crime Sullia: ಫ್ರೊ.ರಾಮಕೃಷ್ಣ ಕೊಲೆ ಪ್ರಕರಣ; ಆರೋಪಿಗಳು ದೋಷಮುಕ್ತ!

Sullia: ಫ್ರೊ.ರಾಮಕೃಷ್ಣ ಕೊಲೆ ಪ್ರಕರಣ; ಆರೋಪಿಗಳು ದೋಷಮುಕ್ತ!

Hindu neighbor gifts plot of land

Hindu neighbour gifts land to Muslim journalist

Sullia : ಸುಪ್ರೀಂ ಕೋರ್ಟ್ ಇಂದು ಪ್ರೊ.ಎ.ಎನ್‌.ರಾಮಕೃಷ್ಣ ಹತ್ಯೆ ಪ್ರಕರಣದಲ್ಲಿ ಆರೋಪಿಗಳಾಗಿದ್ದ ಎಲ್ಲ ಆರೋಪಿಗಳನ್ನೂ ಪ್ರಕರಣದಿಂದ ದೋಷಮುಕ್ತಗೊಳಿಸಿದೆ.

2011 ರಲ್ಲಿ ಪ್ರೊ.ರಾಮಕೃಷ್ಣರ ಹತ್ಯೆ ನಡೆದಿದ್ದು, ಈ ಪ್ರಕರಣ ಜಿಲ್ಲಾ ಸೆಶನ್ಸ್ ನ್ಯಾಯಾಲಯದಲ್ಲಿ ವಿಚಾರಣೆ ನಡೆದು 2016 ರಲ್ಲಿ ಈ ಪ್ರಕರಣ ತಪ್ಪಿ ಹೋಗಿತ್ತು. ಈ ತೀರ್ಪಿನ ವಿರುದ್ಧ ಸರಕಾರ ಹೈಕೋರ್ಟಿಗೆ ಮೇಲ್ಮನವಿ ಸಲ್ಲಿಸಿ, ವಿಚಾರಣೆ ನಡೆದು 2023 ರಲ್ಲಿ ಆರೋಪಿಗಳಿಗೆ ಜೀವಾವಧಿ ಶಿಕ್ಷೆಯಾಗಿತ್ತು. ಇದರ ವಿರುದ್ಧ ಶಿಕ್ಷೆಗೊಳಗಾದವರು ಸುಪ್ರೀಂಕೋರ್ಟಿನ ಮೆಟ್ಟಿಲೇರಿದ್ದರು. ಸುಪ್ರೀಂಕೋರ್ಟು ಹೈಕೋರ್ಟು ವಿಧಿಸಿದ ಶಿಕ್ಷೆಯನ್ನು ಅಮಾನತಿಸಲ್ಲಿರಿಸಿ, ಆರೋಪಿಗಳಿಗೆ ಜಾಮೀನು ನೀಡಿತ್ತು. ಬಳಿಕ ವಿಚಾರಣೆ ನಡೆದು ಇಂದು ಸುಪ್ರೀಂಕೋರ್ಟ್ ತೀರ್ಪು ನೀಡಿದೆ.

ಪ್ರಕರಣದ ಆರೋಪಿಗಳಾದ ಡಾ.ರೇಣುಕಾಪ್ರಸಾದ್, ಮನೋಜ್ ರೈ, ನಾಗೇಶ್ ಎಚ್.ಆರ್.. ವಾಮನ ಪೂಜಾರಿ, ಕರನ್ ಮಂಗಳೂರು, ಭವಾನಿಶಂಕರ -ಎಲ್ಲರನ್ನೂ ಸುಪ್ರೀಂಕೋರ್ಟ್ ಪ್ರಕರಣದಿಂದ ಖುಲಾಸೆಗೊಳಿಸಿದೆ.