BPL Card ಹೊಂದಿರುವವರಿಗೆ ಸಿಹಿ ಸುದ್ದಿ – ಮೂರು ತಿಂಗಳ ರೇಷನ್ ಮುಂಗಡ ವಿರಿಸಲು ಕೇಂದ್ರ ಆದೇಶ !!

BPL Card: ಭಾರತ ಮತ್ತು ಪಾಕಿಸ್ತಾನ ನಡುವೆ ಯುದ್ಧದ ಬಿಕ್ಕಟ್ಟು ಎದುರಾದ ಕಾರಣ ಕೇಂದ್ರ ಸರ್ಕಾರ ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಮೂರು ತಿಂಗಳ ಪಡಿತರವನ್ನು ಮುಂಚಿತವಾಗಿ ನೀಡಲು ನಿರ್ಧರಿಸಿದೆ.

ಹೌದು, ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ ಅಡಿಯಲ್ಲಿ ಬಿಪಿಎಲ್ ಪಡಿತರ ಚೀಟಿ ಫಲಾನುಭವಿಗಳಿಗೆ ಮೂರು ತಿಂಗಳ ಪಡಿತರವನ್ನು ಮುಂಗಡವಾಗಿ ವಿತರಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ನ್ಯಾಯಬೆಲೆ ಅಂಗಡಿಗಳ ಮೂಲಕ ಫಲಾನುಭವಿಗಳಿಗೆ ಪಡಿತರ ವಿತರಿಸಲು ಕೇಂದ್ರ ಸರ್ಕಾರ ಆದೇಶ ನೀಡಿದೆ.
ಇನ್ನು ಮುಂಗಾರು ಮಳೆ ಆಗಮನ ಹಿನ್ನೆಲೆಯಲ್ಲಿ ಪ್ರತಿ ಮನೆಗೂ ಆಹಾರ ಭದ್ರತೆ ಒದಗಿಸಲು ಈ ನಿರ್ಧಾರ ಕೈಗೊಳ್ಳಲಾಗಿದೆ. ಭಾರಿ ಮಳೆಯ ಸಂದರ್ಭದಲ್ಲಿ ದುರ್ಗಮ ಪ್ರದೇಶದಲ್ಲಿ ಸಂಪರ್ಕ ಕಡಿತಗೊಂಡು ಉಂಟಾಗುವ ಅಡೆತಡೆ ನಿವಾರಿಸುವುದು ಈ ಉದ್ದೇಶವಾಗಿದೆ.
ರಾಜ್ಯ ಸರ್ಕಾರವು ಇದೇ ನಿರ್ಧಾರವನ್ನು ಕೈಗೊಳ್ಳುತ್ತದೆಯೇ ಎಂದು ಕಾದು ನೋಡಬೇಕಿದೆ. ಒಂದು ವೇಳೆ ಕೇಂದ್ರದ ಸೂಚನೆಯಂತೆ ರಾಜ್ಯ ಸರ್ಕಾರವು ನಿರ್ಧರಿಸಿದಲ್ಲಿ ಬಿಪಿಎಲ್ ಕಾರ್ಡ್ ಸದಸ್ಯರಿಗೆ ತಲಾ 10 ಕೆಜಿ ಧಾನ್ಯದಂತೆ 3 ತಿಂಗಳಿಗೆ 30 ಕೆಜಿ ಧಾನ್ಯ ವಿತರಣೆಯಾಗಲಿದೆ.
Comments are closed.