Punjab: ಪಾಕಿಸ್ತಾನಿ ಅಧಿಕಾರಿ ಪರವಾಗಿ ಬೇಹುಗಾರಿಕೆ: ಪಂಜಾಬ್‌ನಲ್ಲಿ ಇಬ್ಬರ ಅರೆಸ್ಟ್‌

Share the Article

Punjab: ದೆಹಲಿಯ ಹೈಕಮಿಷನ್‌ನಲ್ಲಿ ನಿಯೋಜನೆ ಮಾಡಲಾದ ಪಾಕಿಸ್ತಾನಿ ಅಧಿಕಾರಿಗಳೊಂದಿಗೆ ಸಂಪರ್ಕ ಹೊಂದಿದ್ದ ಇಬ್ಬರು ವ್ಯಕ್ತಿಗಳನ್ನು ಬೇಹುಗಾರಿಕೆ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪದಲ್ಲಿ ಬಂಧನ ಮಾಡಲಾಗಿದೆ ಎಂದು ಪಂಜಾಬ್‌ ಪೊಲೀಸರು ಇಂದು ತಿಳಿಸಿದ್ದಾರೆ. Q

ಭಾರತೀಯ ಸೇನೆಗಳ ಚಲನವಲನಗಳ ಕುರಿತು ಪಾಕಿಸ್ತಾನ ಮೂಲದ ಹ್ಯಾಂಡ್ಲರ್‌ಗೆ ಸೂಕ್ಷ್ಮ ಮಾಹಿತಿಯನ್ನು ಸೋರಿಕೆ ಮಾಡಿದ್ದಕ್ಕಾಗಿ ಮೊದಲಿಗೆ ಒಬ್ಬ ಶಂಕಿತನನ್ನು ಬಂಧನ ಮಾಡಲಾಯಿತು ಎಂದು ಪೊಲೀಸ್‌ ಮಹಾನಿರ್ದೇಶಕ ಗೌರವ್‌ ಯಾದವ್‌ ತಿಳಿಸಿದ್ದಾರೆ. ವಿಚಾರಣೆಯ ಸಂದರ್ಭದಲ್ಲಿ ಸಿಕ್ಕದ ಮಾಹಿತಿಯ ಆಧಾರದ ಮೇಲೆ ಇನ್ನೋರ್ವನನ್ನು ವಶಕ್ಕೆ ಪಡೆಯಲಾಗಿದೆ ಎಂದು ಡಿಜಿಪಿ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿ ತಿಳಿಸಿದ್ದಾರೆ.

ಆರೋಪಿಗಳು ಪಾಕಿಸ್ತಾನಕ್ಕೆ ಮಾಹಿತಿ ಹಂಚಿಕೆ ಮಾಡಿ ಆನ್‌ಲೈನ್‌ ಮೂಲಕ ಹಣ ಸ್ವೀಕರಿಸುತ್ತಿದ್ದರು ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ. ಬಂಧಿತ ಆರೋಪಿಗಳಿಂದ ಎರಡು ಮೊಬೈಲ್‌ ಫೋನ್‌ಗಳನ್ನು ವಶಪಡಿಸಲಾಗಿದ್ದು, ಎಫ್‌ಐಆರ್‌ ದಾಖಲು ಮಾಡಲಾಗಿದೆ ಎಂದು ವರದಿಯಾಗಿದೆ.

Comments are closed.