Mangaluru: ಮಂಗಳೂರು ಗಲಭೆ; ಅಪಪ್ರಚಾರದ ವಿರುದ್ಧ ಕಠಿಣ ಕ್ರಮ: ದಿನೇಶ್ ಗುಂಡೂರಾವ್ ಎಚ್ಚರಿಕೆ

Mangaluru: ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ, ಸುಳ್ಳು ಸುದ್ದಿ, ದುರುದ್ದೇಶಪೂರಿತ ಪೋಸ್ಟ್ ಹಾಕುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ನಿರ್ದೇಶನ ನೀಡಲಾಗಿದೆ. ಅದರಂತೆ ಅನೇಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ, ಇದು ಮುಂದುವರಿಯಲಿದೆ ಎಂದು ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ನಕಲಿ ಖಾತೆಗಳ ಮೂಲಕ ದುರುದ್ದೇಶದ ಪೋಸ್ಟ್ ಹಾಕುತ್ತಿರುವುದು ಕಂಡು ಬಂದಿದೆ. ಅವರ ಪತ್ತೆ ಕಾರ್ಯ ನಡೆದಿದೆ. ಸಾಮಾಜಿಕ ಜಾಲತಾಣಗಳಲ್ಲಿ ಸೈನಿಕರ ವಿರುದ್ಧದ ಯಾವುದೇ ಅಪಪ್ರಚಾರ, ಹೇಳಿಕೆಯನ್ನು ಸಹಿಸಲಾಗದು. ದೇಶದ ವಿಚಾರ ಬಂದಾಗ ನಾವೆಲ್ಲರೂ ಒಂದೇ. ತಿರಂಗ ಯಾತ್ರೆ ಈಗಾಗಲೇ ಮಾಡಲಾಗಿದ್ದು, ಭಾರತೀಯ ಸೇನೆ ಮತ್ತು ಭಾರತ ಸರಕಾರದ ಜೊತೆ ನಾವಿದ್ದೇವೆ ಎಂದು ಸ್ಪಷ್ಟ ಪಡಿಸಲಾಗಿದೆ. ದೇಶದ ಏಕತೆ, ಭದ್ರತೆಗೆ ಚ್ಯುತಿ ತರುವ ವ್ಯಕ್ತಿಗಳ ವಿರುದ್ಧ ಕ್ರಮಕ್ಕೆ ಹಿಂದೇಟು ಹಾಕಲಾಗದು ಎಂದು ದಿನೇಶ್ ಗುಂಡೂರಾವ್ ಹೇಳಿದ್ದಾರೆ.
Comments are closed.