Physical Abuse: ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಕಾಮುಕನಿಗೆ ಭರ್ಜರಿ ಚಪ್ಪಲಿಯೇಟು ನೀಡಿದ ತಾಯಿ

Share the Article

Physical Abuse: ಉತ್ತರ ಪ್ರದೇಶದ ಹಮೀರ್ಪುರದಲ್ಲಿ ಮಹಿಳೆಯೊಬ್ಬರು ತನ್ನ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ವ್ಯಕ್ತಿಗೆ ಭೀಕರವಾಗಿ ಥಳಿಸಿರುವ ಘಟನೆ ನಡೆದಿದೆ. ಈ ಕುರಿತು ವೀಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್‌ ಆಗಿದೆ.

ಮಹಿಳೆ ವಿಕೃತ ವ್ಯಕ್ತಿಗೆ ಚಪ್ಪಲಿಯಿಂದ ಹೊಡೆಯುತ್ತಿರುವುದು ವಿಡಿಯೋದಲ್ಲಿ ಕಂಡು ಬಂದಿದೆ. ಆದರೆ ಆ ವ್ಯಕ್ತಿ ಮಹಿಳೆಯಲ್ಲಿ ನನ್ನನ್ನು ಬಿಟ್ಟು ಬಿಡುವಂತೆ ಬೇಡಿಕೊಳ್ಳುವುದು ಕಾಣುತ್ತಿದೆ. ಆದರೆ ಮಹಿಳೆ ಮಾತ್ರ ಕೋಪದಿಂದ ಮತ್ತಷ್ಟು ಪೆಟ್ಟು ಹೊಡೆದಿದ್ದಾಳೆ.

ಹರ್ಮೀಪುರದ ಮುಸ್ಕಾರ ಪೊಲೀಸ್‌ ಠಾಣೆಯಲ್ಲಿ ಈ ಘಟನೆ ನಡೆದಿದೆ. ಮಹಿಳೆ ಪುರುಷನಿಗೆ ಚಪ್ಪಲಿಯಿಂದ ಸುಮಾರು 15 ಬಾರಿ ಹೊಡೆದಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ವೈರಲ್‌ ವಿಡಿಯೋ ಪೊಲೀಸರ ಗಮನಕ್ಕೆ ಬಂದಿದ್ದು, ಯುವಕನನ್ನು ಗುರುತಿಸಲಾಗಿದೆ ಎಂದು ಹೇಳಿದ್ದಾರೆ.

Comments are closed.