Home News Udupi: ಕುಡಿದ ಮತ್ತಿನಲ್ಲಿ ಸ್ವತಃ ತನ್ನ ಮನೆಗೆ ಬೆಂಕಿ ಹಚ್ಚಿದ ಮದ್ಯ ವ್ಯಸನಿ!!

Udupi: ಕುಡಿದ ಮತ್ತಿನಲ್ಲಿ ಸ್ವತಃ ತನ್ನ ಮನೆಗೆ ಬೆಂಕಿ ಹಚ್ಚಿದ ಮದ್ಯ ವ್ಯಸನಿ!!

Hindu neighbor gifts plot of land

Hindu neighbour gifts land to Muslim journalist

Udupi: ಕುಡಿದ ಮತ್ತಿನಲ್ಲಿ ವ್ಯಕ್ತಿಯೋರ್ವ ತನ್ನದೇ ಮನೆಗೆ ಬೆಂಕಿ ಹಚ್ಚಿದ ಘಟನೆ ಉಡುಪಿಯಲ್ಲಿ (Udupi) ನಡೆದಿದೆ.

ಮದ್ಯದ ಅಮಲಿನಲ್ಲಿದ್ದ ವ್ಯಕ್ತಿ ಗಲಾಟೆ ಮಾಡಿ ಉಗ್ರ ವರ್ತನೆ ತೋರಿದ್ದರಿಂದ ಆತನ ಕುಟುಂಬ ಸದಸ್ಯರು ಭಯಭೀತರಾಗಿದ್ದರು ಎನ್ನಲಾಗಿದೆ. ಪರಿಸ್ಥಿತಿಯನ್ನು ನಿಭಾಯಿಸಲು ಸಾಧ್ಯವಾಗದ ಕುಟುಂಬ ಸದಸ್ಯರು ಸಮಾಜ ಸೇವಕ ನಿತ್ಯಾನಂದ ಒಳಕಾಡು ಅವರ ಸಹಾಯ ಕೋರಿದರು. ತಕ್ಷಣ ಸ್ಪಂದಿಸಿದ ನಿತ್ಯಾನಂದ ಒಳಕಾಡು ಸ್ಥಳಕ್ಕೆ ಧಾವಿಸಿ ಅಗ್ನಿಶಾಮಕ ದಳಕ್ಕೆ ಬೆಂಕಿಯ ಬಗ್ಗೆ ಮಾಹಿತಿ ನೀಡಿದ್ದಾರೆ.

ತಕ್ಷಣ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದವರು ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇದರಿಂದಾಗಿ ಭಾರೀ ಅಗ್ನಿ ದುರಂತವೊಂದು ತಪ್ಪಿದಂತಾಗಿದೆ.

ಘಟನೆಯ ನಂತರ, ಸಮಾಜ ಸೇವಕ ನಿತ್ಯಾನಂದ ಒಳಕಾಡು ಅವರು ಕುಡಿದಿದ್ದ ವ್ಯಕ್ತಿಯನ್ನು ಸಮಾಧಾನಪಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ವ್ಯಸನ ಮುಕ್ತಿ ಕೇಂದ್ರಕ್ಕೆ ದಾಖಲಿಸಿದ್ದಾರೆ ಎನ್ನಲಾಗಿದೆ.