Mangalore: ಮೇ 16 ರಂದು ಮಂಗಳೂರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ

Mangalore: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೇ 16 ರಂದು ಶುಕ್ರವಾರ ಮಂಗಳೂರಿಗೆ ಭೇಟಿ ನೀಡಲಿದ್ದಾರೆ. ಕಾಮಗಾರಿಗಳ ಉದ್ಘಾಟನೆ, ವೀಕ್ಷಣೆ, ಉಳ್ಳಾಲ ಉರೂಸ್‌ಗೆ ಭೇಟಿ ನೀಡುವರು.

ಮಂಗಳೂರಿನ ಉರ್ವದಲ್ಲಿ ನಿರ್ಮಾಣ ಮಾಡಿರುವ 30ಕೋಟಿ ರೂಪಾಯಿ ವೆಚ್ಚದ ಒಳಾಂಗಣ ಕ್ರೀಡಾಂಗಣ ಮತ್ತು 75 ಕೋಟಿ ರೂಪಾಯಿ ಅನುದಾನದಲ್ಲಿ ಪಡೀಲ್‌ನಲ್ಲಿ ನಿರ್ಮಾಣಗೊಂಡಿರುವ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿ ಕಟ್ಟಡ ಸಂಕೀರ್ಣ ಪ್ರಜಾ ಸೌಧದ ಉದ್ಘಾಟನೆಯನ್ನು ಮುಖ್ಯಮಂತ್ರಿ ನೆರವೇರಿಸುವರು. ನಂತರ ಸಂಜೆ ಉಳ್ಳಾಲದಲ್ಲಿ ನಡೆಯುತ್ತಿರುವ ಉರೂಸ್ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದರು.
ನಂತರ 8 ಸಾವಿರ ಫಲಾನುಭವಿಗಳಿಗೆ ಆರ್ಟಿಸಿ ಪತ್ರ ವಿತರಣೆ, ಮೂರು ನಿಗಮಗಳಿಂದ ಫಲಾನುಭವಿಗಳಿಗೆ ಸೌಲಭ್ಯ ವಿತರಣೆ ಮಾಡಲಿರುವರು ಎಂದು ಮಂಜುನಾಥ ಭಂಡಾರಿ ತಿಳಿಸಿದರು.
ಅಪರಾಹ್ನ 3.15 ಕ್ಕೆ ಬಜಪೆ ವಿಮಾನ ನಿಲ್ದಾಣಕ್ಕೆ ಬರಲಿರುವ ಸಿಎಂ ಮಂಗಳೂರಿನ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ರಾತ್ರಿ 8.15 ಕ್ಕೆ ಬೆಂಗಳೂರಿಗೆ ವಾಪಸಾಗಲಿದ್ದಾರೆ.
Comments are closed.