Accident : ತಿರುಪತಿಯಲ್ಲಿ ಕರ್ನಾಟಕದ ವಾಹನ ಅಪಘಾತ – ದಕ್ಷಿಣ ಕನ್ನಡದ ಮಹಿಳೆ ಸಾವು

Share the Article

Accident : ತಿರುಪತಿಯಲ್ಲಿ ದೇವರ ದರ್ಶನಕ್ಕೆ ತೆರಳಿದ ಸಂದರ್ಭ ಕರ್ನಾಟಕದ ವಾಹನ ಒಂದು ಅಪಘಾತವಾಗಿ ದಕ್ಷಿಣ ಕನ್ನಡದ ಮೂಲದ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ.

ಹೌದು ತಿರುಪತಿಗೆ ತೆರಳುತ್ತಿದ್ದ ಸಂದರ್ಭ ಕರ್ನಾಟಕದ ವಾಹನ ಅಪಘಾತಕ್ಕೀಡಾಗಿದೆ. ತಿರುಪತಿ-ಶ್ರೀ ಕಾಳಹಸ್ತಿ ಹೆದ್ದಾರಿಯಲ್ಲಿ ಬುಧವಾರ ಬೆಳಿಗ್ಗೆ ಘಟನೆ ಸಂಭವಿಸಿದೆ. ಈ ವೇಳೆ ಕಡಬ ತಾಲೂಕಿನಬಿಳಿನೆಲೆ ಕೈಕಂಬದ ಶೇಷಮ್ಮ (70) ಮಹಿಳೆ ಮೃತಪಟ್ಟಿದ್ದಾರೆ. 15ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಅಂದಹಾಗೆ ಕೈಕಂಬದ ಕುಟುಂಬ ಹಾಗೂ ಅವರ ಸಂಬಂಧಿಕರು ಪ್ಯಾಕೇಜ್ ಟೂರ್‌ ಯೋಜನೆಯಡಿ ಟಿಟಿಯಲ್ಲಿ ತಿರುಪತಿ ಯಾತ್ರೆ ಕೈಗೊಂಡಿದ್ದರು. ಒಟ್ಟು ಮೂರು ವಾಹನಗಳಲ್ಲಿ ಕರ್ನಾಟಕದ ಇತರ ಭಾಗದವರೂ ವಾಹನದಲ್ಲಿದ್ದರು. ಬುಧವಾರ ಸಂಜೆ ತಿರುಪತಿಯಲ್ಲಿ ದರ್ಶನ ನೆರವೇರಿಸುವುದಕ್ಕೂ ಮೊದಲು ಶ್ರೀಕಾಳಹಸ್ತಿಗೆ ಕರ್ನಾಟಕದ ತಂಡ ಹೊರಟಿತ್ತು. ಕೈಕಂಬದವರು ಇದ್ದ ವಾಹನ ಮೇಲ್ಸೇತುವೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಬಡಿದು ಪಲ್ಟಿಯಾಗಿದೆ. ತೀವ್ರ ಗಾಯಗೊಂಡಿದ್ದ ಕೂಸಪ್ಪ ಅವರ ಪತ್ನಿ ಶೇಷಮ್ಮ (70) ಮೃತರಾಗಿದ್ದಾರೆ. ಕೈಕಂಬದ ತಿಲೇಶ್ (45), ಕಮಲಾಕ್ಷಿ (60) ಗಂಭೀರ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

Comments are closed.