Mangaluru : ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ – ಕೊಲೆಗೆ ನೆರವು ನೀಡಿದ್ದ ಮತ್ತೊಬ್ಬ ಆರೋಪಿಯ ಬಂಧನ

Mangaluru : ಮಂಗಳೂರಿನ ಬಜ್ಪೆಯಲ್ಲಿ ನಡೆದ ಹಿಂದೂ ಕಾರ್ಯಕರ್ತ ಸುಹಸ್ ಶೆಟ್ಟಿ ಕೊಲೆ ಪ್ರಕರಣ ರಾಜ್ಯಾದ್ಯಂತ ಸಂಚಲನ ಸೃಷ್ಟಿಸಿತ್ತು. ಪ್ರಕರಣದ ಬೆನ್ನಲ್ಲೇ ಪೊಲೀಸರು ಆರೋಪಿಗಳಿಗಾಗಿ ಬಲೆ ಬೀಸಿದ್ದರು. ಮೊನ್ನೆ ತಾನೇ ತಲೆಮರೆಸಿಕೊಂಡಿದ್ದ ಕೊಲೆ ಪ್ರಕರಣದ ಮೂವರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದರು. ಈ ಬೆನ್ನಲ್ಲೇ ಕೊಲೆಗೆ ನೆರವು ನೀಡಿದ ಮತ್ತೊಬ್ಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಹೌದು, ಸುಹಾಸ್ ಶೆಟ್ಟಿ ಕೊಲೆಗೆ ನೆರವು ನೀಡಿದ ಆರೋಪದಲ್ಲಿ ಇಲ್ಲಿನ ನೌಶಾದ್ ಅಲಿಯಾಸ್ ಚೋಟೆ ನೌಶಾದ್(39)ನನ್ನು ಮಂಗಳೂರು ಸಿಸಿಬಿ ಪೊಲೀಸರು ಗುರುವಾರ ಬಂಧಿಸಿದ್ದಾರೆ. ಇಲ್ಲಿನ ಮಹಿಳಾ ಪೊಲೀಸ್ ಠಾಣೆ ಮುಂಭಾಗದಲ್ಲಿ ಹೋಟೆಲ್ ನಡೆಸುತ್ತಿದ್ದ ಆರೋಪಿಯು ಕೆ.ಆರ್.ಪುರಂನಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದಾಗಿದ್ದ. ಕೊಲೆಗೆ ಸಂಚು ರೂಪಿಸಲು ನೆರವು ನೀಡಿದ ಆರೋಪದ ಮೇರೆಗೆ ಆತನನ್ನು ಬಂಧಿಸಲಾಗಿದೆ.
ಅಂದಹಾಗೆ ಆತನ ವಿರುದ್ಧ ಸುರತ್ಕಲ್, ಬಜ್ಪೆ, ಮೂಡುಬಿದರೆ, ಮಂಗಳೂರು, ಉತ್ತರ ಬಂಟ್ವಾಳ ಗ್ರಾಮಾಂತರ ಠಾಣೆಗಳಲ್ಲಿ ಆರು ಪ್ರಕರಣಗಳು ದಾಖಲಾಗಿವೆ. ಇನ್ನು ಆರೋಪಿಯೊ ಹೋಟೆಲ್ ಉದ್ಯಮ ನಡೆಸುತ್ತಿದ್ದು ಈ ಘಟನೆ ನಡೆದ ಬಳಿಕ ಹೋಟೆಲ್ ಅನ್ನು ಬಂದ್ ಮಾಡಿ ನಾಪತ್ತೆಯಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
Comments are closed.