Gruhajyoti: ಗೃಹಜ್ಯೋತಿ ಫಲಾನುಭವಿಗಳಿಗೆ ಗುಡ್ ನ್ಯೂಸ್ – 200 ಯುನಿಟ್ ಗಿಂತಲೂ ಹೆಚ್ಚಿನ ಬಳಕೆಯ ಮಿತಿಗೆ ಸರ್ಕಾರದ ಅನುಮತಿ !!


Gruhajyoti: ರಾಜ್ಯ ಸರ್ಕಾರ ತಾನು ಅಧಿಕಾರಕ್ಕೆ ಬರುವ ಹೊತ್ತಿನಲ್ಲಿ, ಚುನಾವಣಾ ಪೂರ್ವದಲ್ಲಿ ಪಂಚ ಗ್ಯಾರೆಂಟಿಗಳನ್ನು ಘೋಷಣೆ ಮಾಡಿತ್ತು. ಅಂತಗೆ ತಾನು ಮಾತು ಕೊಟ್ಟಂತೆ ಅಧಿಕಾರದ ಚುಕ್ಕಾಣಿ ಹಿಡಿದಾಗ ಅಷ್ಟು ಯೋಜನೆಗಳನ್ನು ಜಾರಿಗೆ ತಂದಿದ್ದು. ಅದರಲ್ಲಿ ‘ಗೃಹಜ್ಯೋತಿ’ ಯೋಜನೆ ಕೂಡ ಪ್ರಮುಖವಾದದ್ದು. ಇದೀಗ ಈ ಯೋಜನೆಯ ಫಲಾನುಭವಿಗಳಿಗೆ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ಶೇಕಡ 10 ರಷ್ಟು ಹೆಚ್ಚು ವಿದ್ಯುತ್ ನೀಡಲು ಸರ್ಕಾರ ಆದೇಶಿಸಿದೆ.

ಹೌದು, ಗೃಹಜ್ಯೋತಿ ಯೋಜನೆಯಡಿ ರಾಜ್ಯದಲ್ಲಿನ ಪ್ರತಿ ಮನೆಗೆ ತಿಂಗಳಿಗೆ ಗರಿಷ್ಠ 200 ಯೂನಿಟ್‌ಗಳವರೆಗೆ ಬಳಕೆಯ ಮಿತಿಯಲ್ಲಿ ಪ್ರತಿ ಗೃಹಬಳಕೆ ಗ್ರಾಹಕರ ಮಾಸಿಕ ಸರಾಸರಿ ಬಳಕೆಯ(ಆರ್ಥಿಕ ವರ್ಷ 2022-23 ರ ಬಳಕೆಯ ಆಧಾರದನ್ವಯ) ಯೂನಿಟ್‌ಗಳ ಮೇಲೆ ಶೇ.10 ರಷ್ಟು ಹೆಚ್ಚಿನ ಬಳಕೆಯ ಮಿತಿಗೆ ಅನುಮತಿಸಿ, ಅದಕ್ಕನುಗುಣವಾಗಿ ವಿದ್ಯುತ್ ಬಿಲ್ಲಿನ ಮೊತ್ತವನ್ನು ಉಚಿತವಾಗಿ ಒದಗಿಸಲು ಸರ್ಕಾರ ಆದೇಶಿಸಿದೆ.

Comments are closed.