Bengaluru : ಬಿಡದಿ ಬಾಲಕಿ ಕೊಲೆ ಪ್ರಕರಣಕ್ಕೆ ಟ್ವಿಸ್ಟ್ – ಬಾಲಕಿ ಮೇಲೆ ರೇಪ್ ನಡೆದಿಲ್ಲ ಎಂದ ‘FSL’ ರಿಪೋರ್ಟ್ !!

Bengaluru : ಬೆಂಗಳೂರಿನ ಭದ್ರಾಪುರದ ಹಕ್ಕಿಪಿಕ್ಕಿ ಕಾಲೊನಿಯಲ್ಲಿ ವಾರದ ಹಿಂದೆ ಮಾತು ಬಾರದ ಮತ್ತು ಕಿವಿ ಕೇಳಿಸದ ಬಾಲಕಿ ಶವವಾಗಿ ಪತ್ತೆಯಾಗಿದ್ದ ಪ್ರಕರಣ ರಾಜ್ಯಾದ್ಯಂತ ಸಂಚಲನ ಸೃಷ್ಟಿಸಿತ್ತು. ಅತ್ಯಾಚಾರದ ಇದು ಬಾಲಕಿಯನ್ನು ಕೊಲ್ಲಲಾಗಿತ್ತು ಎಂದು ಆರೋಪಿಸಲಾಗಿತ್ತು. ಆದರೆ ಈಗ ಈ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು ಬಾಲಕಿಯ ಮೇಲೆ ಅತ್ಯಾಚಾರ ನಡೆದಿಲ್ಲ ಎಂಬುದು ವಿಧಿ ವಿಜ್ಞಾನ ಪ್ರಯೋಗಾಲಯದ (ಎಫ್‌ಎಸ್‌ಎಲ್) ವರದಿಯಿಂದ ದೃಢಪಟ್ಟಿದೆ.

ಹೌದು, ಭದ್ರಾಪುರ ಬಳಿ ರೈಲ್ವೆ ಹಳಿ ಸಮೀಪ ಬಾಲಕಿಯ ಮೃತ ದೇಹ ಪತ್ತೆಯಾಗಿತ್ತು. ಬಿಡದಿ ಠಾಣೆ ಪೊಲೀಸರು ಕೇಸ್ ದಾಖಲಿಸಿ ಕೊಂಡು ತನಿಖೆ ಅರಭಿಸಿದ್ದರು. ಬಾಲಕಿ ಕೊಲೆ ಪ್ರಕರಣ ರಾಜ್ಯದಲ್ಲಿ ಸಾಕಷ್ಟು ಸಂಚಲನ ಮೂಡಿಸಿತ್ತು. ಇದೀಗ FSL ವರದಿಯ ಆಧಾರದಲ್ಲಿ ಅತ್ಯಾಚಾರ ನಡೆದಿಲ್ಲ ಎಂದು ನಿರ್ಧರಿಸಲಾಗಿದೆ.
ಅಂದಹಾಗೆ ಇದೀಗ ಬಂದಂತಹ FSL ವರದಿಯ ಪ್ರಕಾರ ಬಾಲಕಿಯ ದೇಹದ ಮೇಲೆ ಯಾವುದೇ ಸುಟ್ಟ ಕಲೆಗಳು ಪತ್ತೆಯಾಗಿಲ್ಲ. ಮೇಲ್ನೋಟಕ್ಕೆ ದಿವ್ಯಾಂಗ ಬಾಲಕಿಗೆ ರೈಲು ಬಡಿದಿರುವುದು ಪತ್ತೆಯಾಗಿದೆ. ಮರಣೋತ್ತರ ಪರೀಕ್ಷೆಯ ವರದಿ ಬಂದ ನಂತರ ನಿಖರವಾದ ಕಾರಣ ತಿಳಿಯಲಿದೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್. ಶ್ರೀನಿವಾಸ ಗೌಡ ಅವರು, ಬಿಡದಿ ಪೊಲೀಸ್ ಠಾಣೆಯಲ್ಲಿ ರಾತ್ರಿ ಸುದ್ದಿಗೋಷ್ಠಿ ನಡೆಸಿದ್ದು ‘ಪುತ್ರಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿದೆ ಎಂದು ತಾಯಿ ಸೇರಿದಂತೆ ಕುಟುಂಬದವರು ಆರೋಪಿಸಿದ್ದರು. ಹಾಗಾಗಿ, ಮರಣೋತ್ತರ ಪರೀಕ್ಷೆ ಸಂದರ್ಭದಲ್ಲಿ ಬಾಲಕಿ ದೇಹದ 32 ಮಾದರಿಗಳನ್ನು ಸಂಗ್ರಹಿಸಿ ಎಫ್‌ಎಸ್‌ಎಲ್‌ಗೆ ಕಳಿಸಲಾಗಿತ್ತು. ಇಂದು ಸಂಜೆ ಕೈ ಸೇರಿದ ವರದಿಯಲ್ಲಿ ಅತ್ಯಾಚಾರ ನಡೆದಿಲ್ಲ ಎಂಬುದು ಗೊತ್ತಾಗಿದೆ. ಬಾಲಕಿ ತಲೆಗೆ ಗಂಭೀರವಾದ ಪೆಟ್ಟು ಬಿದ್ದಿರುವ ಗುರುತುಗಳಿವೆ. ಸಾಮಾಜಿಕ ಮಾಧ್ಯಮಗಳಲ್ಲಿ ಹಬ್ಬಿಸಿರುವಂತೆ ಮೈ ಮೇಲೆ ಸಿಗರೇಟಿನಿಂದ ಸುಟ್ಟ ಗಾಯದಂತಹ ಯಾವುದೇ ಗುರುತುಗಳಿಲ್ಲ. ಸದ್ಯದಲ್ಲೇ ಮರಣೋತ್ತರ ಪರೀಕ್ಷೆ ವರದಿಯೂ ಕೈ ಸೇರಲಿದ್ದು, ಆಗ ಸಾವಿಗೆ ನಿಖರ ಕಾರಣ ಗೊತ್ತಾಗಲಿದೆ’ ಎಂದು ಹೇಳಿದ್ದಾರೆ.
ಅಲ್ಲದೆ ‘ಬಾಲಕಿ ರೈಲಿಗೆ ಸಿಲುಕಿ ಮೃತಪಟ್ಟಿದ್ದಾಳೆ’ ಎಂಬ ಮಾತುಗಳ ಕುರಿತ ಪ್ರಶ್ನೆಗೆ, ‘ಇದುವರೆಗಿನ ತನಿಖೆ ಹಾಗೂ ವಿವಿಧ ಸಾಕ್ಷ್ಯಾಧಾರಗಳನ್ನು ಪರಿಶೀಲಿಸಿದಾಗ ಬಾಲಕಿ ರೈಲಿಗೆ ಸಿಲುಕಿ ಮೃತಪಟ್ಟಿರುವುದು ಮೇಲ್ನೊಟಕ್ಕೆ ಕಂಡುಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ 10 ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿತ್ತೇ ಹೊರತು, ಯಾರನ್ನೂ ಬಂಧಿಸಿರಲಿಲ್ಲ’ ಎಂದು ಸ್ಪಷ್ಟಪಡಿಸಿದರು.
Comments are closed.