Sandalwood: ಶಿವಣ್ಣನ ಮನೆಯಲ್ಲಿ ಸ್ಯಾಂಡಲ್ ವುಡ್ ಪ್ರಮುಖರ ದಿಡೀರ್ ಸಭೆ!!

Share the Article

Sandalwood: ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರ ನಿವಾಸದಲ್ಲಿ ಕನ್ನಡ ಚಲನಚಿತ್ರದ ಪ್ರಮುಖರು ದಿಢೀರ್ ಎಂದು ಸಭೆ ಸೇರಿದ್ದು ಕುತೂಹಲಕ್ಕೆ ಕಾರಣವಾಗಿದೆ.

ಹೌದು, ಶಿವರಾಜ್‌ ಕುಮಾರ್‌ ಅವರ ನಿವಾಸದಲ್ಲಿ ದಿಢೀರನೆ ಸಭೆ ಕರೆಯಲಾಗಿದ್ದು, ಈ ಮೀಟಿಂಗ್‌ನಲ್ಲಿ ಸ್ಯಾಂಡಲ್‌ವುಡ್‌ ಸೇರಿದಂತೆ ಹಲವು ಗಂಭೀರ ವಿಚಾರಗಳ ಬಗ್ಗೆ ಚರ್ಚೆ ನಡೆದಿದೆಯಂತೆ.

ಈ ಸಭೆಯಲ್ಲಿ ನಟರಾದ ದುನಿಯಾ ವಿಜಯ್, ಗೋಲ್ಡನ್ ಸ್ಟಾರ್ ಗಣೇಶ್, ಧ್ರುವ ಸರ್ಜಾ ಸೇರಿದಂತೆ ಹಲವು ನಟರು, ಸಿನಿಮಾ ನಿರ್ಮಾಪಕರು, ಪ್ರದರ್ಶಕರು, ವಿತರಕರು ಕೂಡ ಭಾಗಿಯಾಗಿದ್ದರು ಎಂದು ತಿಳಿದುಬಂದಿದೆ.

ಸಭೆಯಲ್ಲಿ ಸೇರಿದ ಎಲ್ಲರೂ ಕೂಡ ಸ್ಯಾಂಡಲ್‌ವುಡ್‌ನಲ್ಲಿ ಈಗ ಎದುರಾಗಿರುವ ಗಂಭೀರ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತಿದ್ದಾರೆ. ತಮ್ಮ ತಮ್ಮ ವಿಭಾಗಗಳಲ್ಲಿ ಇರುವ ಸಮಸ್ಯೆಗಳನ್ನು ಕೂಡ ಮುಂದಿಟ್ಟಿದ್ದಾರೆ ಎನ್ನಲಾಗಿದೆ. ಈ ಸಭೆಯು ದೊಡ್ಮನೆಯ ಶಿವರಾಜ್ ಕುಮಾರ್ ಅವರ ನೇತೃತ್ವದಲ್ಲಿ ನಡೆದಿರುವುದು ಕುತೂಹಲಕ್ಕೆ ಕಾರಣವಾಗಿದೆ. ಪ್ರಮುಖವಾಗಿ ಕನ್ನಡ ಚಿತ್ರರಂಗ ಎದುರಿಸ್ತಿರುವ ಸಮಸ್ಯೆಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆದಿದೆ ಎನ್ನಲಾಗಿದೆ.

Comments are closed.