Mulki: ನಂದಿನಿ ನದಿ ಮಾಲಿನ್ಯ ಮಾಡುವವರಿಗೆ ತಕ್ಕ ಶಾಸ್ತಿ ಮಾಡುವೆ – ಉಳ್ಳಾಯ ದೈವ ಎಚ್ಚರಿಕೆ !!

Mulki: ನಂದಿನಿ ನದಿಯ ಮಾಲಿನ್ಯಕ್ಕೆ ಕಾರಣರಾದವರಿಗೆ ತಕ್ಕ ಶಾಸ್ತಿ ಮಾಡುವುದಾಗಿ ದೈವ ಒಂದು ಅಭಯ ನೀಡಿದ ಘಟನೆ ಮುಲ್ಕಿಯಲ್ಲಿ ನಡೆದಿದೆ.

ಇಲ್ಲಿನ ಚೇಳ್ಯಾರು ಖಂಡಿಗೆ ಧರ್ಮರಸು ಶ್ರೀ ಉಳ್ಳಾಯ, ಪರಿವಾರ ದೈವಗಳ ನೇಮೋತ್ಸವ ಸಂದರ್ಭ ನಂದಿನಿ ನದಿಯ ಮಾಲಿನ್ಯಕ್ಕೆ ಕಾರಣರಾದವರಿಗೆ ತಕ್ಕ ಶಾಸ್ತಿ ಮಾಡುವುದಾಗಿ ದೈವ ಅಭಯ ನೀಡಿದೆ.
ಅಂದಹಾಗೆ ಖಂಡಿಗೆ ಚೇಳ್ಯಾರು ಧರ್ಮರಸು ಶ್ರೀ ಉಳ್ಳಾಯ ದೈವಸ್ಥಾನದ ವಾರ್ಷಿಕ ಜಾತ್ರೆ ಸಂದರ್ಭ ಸಂಪ್ರದಾಯದಂತೆ ಮೀನು ಹಿಡಿಯುವ ಕಾರ್ಯಕ್ರಮ ನಡೆಯುತ್ತದೆ. ಪ್ರಸ್ತುತ ನಂದಿನಿ ನದಿಯಲ್ಲಿ ತ್ಯಾಜ್ಯ ನೀರು ಹರಿಯುವುದರ ಜೊತೆಗೆ ಕಳೆ ತುಂಬಿದ್ದರಿಂದ ಮೀನು ಹಿಡಿಯಲು ಬರುವ ಭಕ್ತರ ಸಂಖ್ಯೆ ಕಡಿಮೆಯಾಗಿದೆ. ಈ ಹಿನ್ನೆಲೆಯಲ್ಲಿ ಈ ಬಾರಿ ದೈವಗಳ ನೇಮೋತ್ಸವ ಸಂದರ್ಭ ನಂದಿನಿ ನದಿ ಮಾಲಿನ್ಯ ದಿಂದ ಜಾತ್ರೆ ಪ್ರಯುಕ್ತ ಖಂಡಿಗೆ ಮೀನು ಹಿಡಿಯುವ ಜಾತ್ರೆ ನಿಂತು ಹೋಗುವ ಪರಿಸ್ಥಿತಿ ಬಂದಿರುವ ಬಗ್ಗೆ ಆಡಳಿತ ಸಮಿತಿ, ನಂದಿನಿ ನದಿ ಸಂರಕ್ಷಣಾ ಸಮಿತಿ ಪದಾಧಿಕಾರಿಗಳು ದೈವದಲ್ಲೇ ನಿವೇದಿಸಿದರು.
ಈ ಬಗ್ಗೆ ಅಭಯ ನೀಡಿದ ಉಳ್ಳಾಯ ದೈವ, ತನ್ನ ಸವಾರಿಯ ನಂದಿನಿ ನದಿ ಉಳಿಸಿಯೇ ಸಿದ್ಧ. ನದಿ ಮಾಲಿನ್ಯ ಕಾರಣರಾದವರಿಗೆ ತಕ್ಕ ಶಾಸ್ತಿ ಮಾಡುತ್ತೇನೆ ಎಂದು ಅಭಯ ನೀಡಿದೆ.
Comments are closed.