K N Rajanna: ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಘೋಷಣೆ ಮಾಡಿದ ರಾಜ್ಯ ಸಹಕಾರ ಸಚಿವ ಕೆ.ಎನ್. ರಾಜಣ್ಣ

K N Rajanna: ಮಂಗಳವಾರ ರಾಜ್ಯ ಸಹಕಾರ ಸಚಿವ ಕೆ.ಎನ್. ರಾಜಣ್ಣ (K N Rajanna) ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ನನಗೆ ಈಗಾಗಲೇ 75 ವರ್ಷವಾಗಿದೆ. ಮುಂದಿನ ಚುನಾವಣೆಗೆ ಸ್ಪರ್ಧಿಸುವ ಆಲೋಚನೆ ಇಲ್ಲ. ಯುವಕರಿಗೆ ಅವಕಾಶ ಸಿಗಬೇಕು ಎಂಬ ದೃಷ್ಟಿಯಿಂದ ಚುನಾವಣೆಗೆ ಸ್ಪರ್ಧೆ ತ್ಯಜಿಸುತ್ತಿದ್ದೇನೆ ಎನ್ನುವ ಮೂಲಕ ರಾಜಕೀಯ ನಿವೃತ್ತಿಯನ್ನು ಘೋಷಿಸಿದ್ದಾರೆ.

ಚುನಾವಣೆಗೆ ನಿಲ್ಲದೆ ಸಹಕಾರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತೇನೆ. ಸಹಕಾರಿ ಸಂಸ್ಥೆಗಳ ಅಭಿವೃದ್ಧಿಗೆ ಮುಂದುವರೆಯುವೆ ಎಂದಿದ್ದಾರೆ.
Comments are closed.