Mangaluru: ಮಂಗಳೂರು: ಬಾಡಿಗೆ ಮನೆಯಲ್ಲಿ ಮಹಿಳೆಯ ಮೃತದೇಹ ಪತ್ತೆ!

Share the Article

Mangaluru: ಬಾಡಿಗೆ ಮನೆಯಲ್ಲಿ ವಾಸವಿದ್ದ ಮಹಿಳೆಯ ಮೃತದೇಹ ಕೊಲೆಯಾದ ಸ್ಥಿತಿಯಲ್ಲಿ ಮನೆಯ ಕೊಠಡಿಯಲ್ಲಿ ಪತ್ತೆಯಾದ ಘಟನೆ ನಗರ ಹೊರವಲಯದ ಕುಡುಪು ಗ್ರಾಮದ ಪಾಲ್ದಾನೆ ಎಂಬಲ್ಲಿ ನಡೆದಿದೆ.

ಮೃತಪಟ್ಟ ಮಹಿಳೆಯನ್ನು ಪಲ್ಲವಿ ಎಂದು ಗುರುತಿಸಲಾಗಿದೆ. ಪಲ್ಲವಿಯ ಪತಿ ನವೀನ್ ಹಾಗೂ ಅತ್ತೆ ಶಾಂತಾ ಸೇರಿಕೊಂಡು ಕೊಲೆ ಮಾಡಿದ್ದಾರೆ ಎಂದು ದೂರಲಾಗಿದೆ. ಭಾನುವಾರ ಶವ ಪತ್ತೆಯಾಗಿದ್ದು, ಘಟನೆಯ ಬಳಿಕ ನವೀನ್ ತಲೆಮರೆಸಿಕೊಂಡಿರುವುದು ಅನುಮಾನಕ್ಕೆ ಕಾರಣವಾಗಿದೆ.

ಈ ಬಗ್ಗೆ ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಪಾಲ್ದಾನೆಯ ಕರುಣಾಕರ ಶೆಟ್ಟಿಯ ಮನೆಯ ಮಹಡಿಯಲ್ಲಿ ನವೀನ್ ಕುಟುಂಬ 3 ತಿಂಗಳಿಂದ ಬಾಡಿಗೆಗೆ ವಾಸವಾಗಿತ್ತು. ನವೀನ್ ನಿತ್ಯವೂ ಪಾನಮತ್ತನಾಗಿ ಪತ್ನಿಯ ಮೇಲೆ ಹಲ್ಲೆ ನಡೆಸುತ್ತಿದ್ದ ಎನ್ನಲಾಗಿದೆ.

Comments are closed.