Booker Award : ಬಾನು ಮುಷ್ತಾಕ್ ಕೃತಿಗೆ ಪ್ರತಿಷ್ಠಿತ ಅಂತರರಾಷ್ಚ್ರೀಯ ‘ಬೂಕರ್ ಪ್ರಶಸ್ತಿ’ – ಇದು ಕನ್ನಡಕ್ಕೆ ಒಲಿದ ಮೊದಲ ಗೌರವ

Booker Award: ಇಡೀ ಕನ್ನಡ ನಾಡಿನ ಜನತೆ ಮತ್ತೆ ಹೆಮ್ಮೆಪಡುವಂತಹ ಸಂದರ್ಭ ಒಂದು ಎದುರಾಗಿದೆ. ಯಾಕೆಂದರೆ ಕನ್ನಡದ ಪ್ರಸಿದ್ಧ ಸಾಹಿತಿ ಬಾನು ಮುಷ್ತಾಕ್ ಅವರು ಪ್ರತಿಷ್ಠಿತ ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಹೌದು, ಬಾನು ಮುಷ್ತಾಕ್ ಅವರ ‘ಹಸೀನಾ ಮತ್ತು ಇತರ ಕತೆಗಳು’ ಕೃತಿಯ ಇಂಗ್ಲಿಷ್ ಅನುವಾದಿತ ಹಾರ್ಟ್ ಲ್ಯಾಂಪ್‌ಗೆ ಪ್ರಶಸ್ತಿ ಸಿಕ್ಕಿದೆ. ಈ ಮೂಲಕ ಇದೇ ಮೊದಲ ಬಾರಿಗೆ ಕನ್ನಡದ ಕೃತಿಗೆ ಈ ಪ್ರತಿಷ್ಠಿತ ಪ್ರಶಸ್ತಿ ಲಭಿಸಿರುವುದು ವಿಶೇಷ.
ಅಂದಹಾಗೆ 1990 ಮತ್ತು 2023ರ ನಡುವೆ ಪ್ರಕಟಗೊಂಡ 12 ಕತೆಗಳನ್ನೊಳಗೊಂಡ ಈ ಸಂಕಲನವನ್ನು ದೀಪಾ ಭಸ್ತಿ ಅವರು ಕನ್ನಡದಿಂದ ಇಂಗ್ಲಿಷ್‌ಗೆ ಅನುವಾದಿಸಿದ್ದರು. ಮುಸ್ಲಿಂ ಸಮುದಾಯದ ಬಾಲಕಿಯರು ಹಾಗೂ ಹೆಣ್ಣುಮಕ್ಕಳ ದೈನಂದಿನ ಬದುಕನ್ನು ಆಧಾರಿಸಿ ಈ ಕಥೆಯನ್ನು ಬರೆಯಲಾಗಿತ್ತು.
ಟೇಟ್ ಮಾಡರ್ನ್ನಲ್ಲಿ ನಡೆದ ಪ್ರಶಸ್ತಿ ಪ್ರದಾನ ಕಾರ್ಯಕ್ರಮದ ಸಮಾರಂಭದಲ್ಲಿ ಮಾತನಾಡಿದ ಬಾನು ಮುಷ್ತಾಕ್ ಅವರು, ವೈವಿಧ್ಯತೆಗೆ ದೊರೆತ ಗೆಲುವು. ಯಾವುದನ್ನು ಸಣ್ಣದು ಎಂದು ತಿಳಿಯಬೇಡಿ. ಪ್ರತಿ ಎಳೆಯು ಕಥೆಯ ಭಾರವನ್ನು ಹೊಂದಿರುತ್ತದೆ. ಇದರಿಂದಲೇ ಈ ಅದ್ಭುತವಾದ ಪುಸ್ತಕ ಸಿದ್ಧವಾಯಿತು ಎಂದು ಹೇಳಿದ್ದಾರೆ.
ಇನ್ನು ಬೂಕರ್ ಪ್ರಶಸ್ತಿ 50 ಸಾವಿರ ಪೌಂಡ್ (ಅಂದಾಜು 57.28 ಲಕ್ಷ ರೂ.) ಒಳಗೊಂಡಿದೆ. ಇದೇ ಅನುವಾದಿತ ಕೃತಿಗೆ ‘ಪೆನ್ ಟ್ರಾನ್ಸ್‌ಲೇಟ್ಸ್’ ಪ್ರಶಸ್ತಿಯೂ ಸಿಕ್ಕಿತ್ತು.
Comments are closed.