Ramanagara: ರಾಮನಗರ ಜಿಲ್ಲೆಗೆ ‘ಬೆಂಗಳೂರು ದಕ್ಷಿಣ’ ಎಂದು ಮರು ನಾಮಕರಣ – ಸಂಪುಟ ಸಭೆ ಅಸ್ತು

Ramanagara: ರಾಮನಗರ ಜಿಲ್ಲೆಯನ್ನು ‘ಬೆಂಗಳೂರು ದಕ್ಷಿಣ ಜಿಲ್ಲೆ’ ಎಂದು ಮರುನಾಮಕರಣ ಮಾಡುವ ಸಂಬಂಧ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ ಇಂದು ಡಿಕೆ ಶಿವಕುಮಾರ್ ಅವರು ಘೋಷಣೆ ಮಾಡಿದ್ದಾರೆ.

ಹೌದು, ರಾಜ್ಯದಲ್ಲಿ ತೀವ್ರ ರಾಜಕೀಯ ಜಿದ್ದಾಜಿದ್ದಿಗೆ ಕಾರಣವಾಗಿದ್ದ ಹಾಗೂ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ರಚನೆ ಮಾಡಿದ್ದ ರಾಮನಗರ ಜಿಲ್ಲೆಯನ್ನು ಇದೀಗ ಕಾಂಗ್ರೆಸ್ ಸರ್ಕಾರದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬೆಂಗಳೂರು ದಕ್ಷಿಣ ಜಿಲ್ಲೆಯಾಗಿ ಮಾಡಿ ಘೋಷಣೆ ಮಾಡಿದ್ದಾರೆ.
ಕುರಿತಾಗಿ ಮಾತನಾಡಿದವರು ‘ರಾಮನಗರ ಜಿಲ್ಲೆ ಈ ಮೊದಲು ಬೆಂಗಳೂರು ಗ್ರಾಮಾಂತರ ಎಂದಿತ್ತು. ನಂತರ ಬೆಂಗಳೂರು ನಗರ ಜಿಲ್ಲೆ ಎಂದಾಗಿತ್ತು. ರಾಮನಗರದ ಹೆಸರನ್ನು ಉಳಿಸಿಕೊಳ್ಳಬೇಕೆಂಬ ಕಾರಣಕ್ಕೆ ಜಿಲ್ಲೆಯ ಎಲ್ಲಾ ಶಾಸಕರುಗಳು ಸೇರಿ ತೀರ್ಮಾನ ಕೈಗೊಂಡು, ಬೆಂಗಳೂರು ದಕ್ಷಿಣ ಜಿಲ್ಲೆಯೆಂದು ಮರು ನಾಮಕರಣ ಮಾಡಲು ಸಂಪುಟದಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ’ ಎಂದು ಅವರು ತಿಳಿಸಿದ್ದಾರೆ.
ಅಲ್ಲದೆ ‘ರಾಮನಗರವೇ ಜಿಲ್ಲಾ ಕೇಂದ್ರ ಸ್ಥಾನ ಆಗಿರಲಿದೆ. ಇದರಲ್ಲಿ ಯಾವುದೇ ರೀತಿಯ ಬದಲಾವಣೆ ಇಲ್ಲ. ಆದರೆ, ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡಲು ಸಂಪುಟ ಒಪ್ಪಿಗೆ ಸೂಚಿಸಿದೆ’ ಎಂದು ಮಾಹಿತಿ ನೀಡಿದ್ದಾರೆ.
Comments are closed.