Belagavi: 17 ವರ್ಷದ ಅಪ್ರಾಪ್ತೆ ಮೇಲೆ ಅತ್ಯಾಚಾರ, ಸ್ವಾಮೀಜಿ ಬಂಧನ

Belagavi: 17 ವರ್ಷದ ಅಪ್ರಾಪ್ತೆ ಮೇಲೆ ಸ್ವಾಮೀಜಿಯಿಂದ ಅತ್ಯಾಚಾರ ಆರೋಪ ಹಿನ್ನಲೆಯಲ್ಲಿ ಜಿಲ್ಲೆಯ ರಾಯಭಾಗ ತಾಲೂಕಿನ ಮೇಖಳಿಯ ರಾಮಮಂದಿರ ಲೋಕೇಶ್ವರ ಮಹಾರಾಜ ಸ್ವಾಮೀಜಿಯನ್ನು ಪೊಲೀಸರು ಬಂಧನ ಮಾಡಿದ್ದಾರೆ.

ಬಾಗಲಕೋಟೆಯ ಮಹಿಳಾ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿತ್ತು. ಮಹಿಳಾ ಠಾಣೆ ಪೊಲೀಸರು ಮೂಡಲಗಿ ಠಾಣೆಗೆ ಪ್ರಕರಣವನ್ನು ವರ್ಗಾವಣೆ ಮಾಡಿದ್ದು, ಸದ್ಯಕ್ಕೆ ಸ್ವಾಮೀಜಿಯನ್ನು ಪೋಕ್ಸೋ ಕೇಸಲ್ಲಿ ಅರೆಸ್ಟ್ ಮಾಡಿ ಜೈಲಿಗೆ ಕಳುಹಿಸಲಾಗಿದೆ.
Comments are closed.