Mangaluru: ಘಾಟಿ ರಸ್ತೆಯಲ್ಲಿ ಭೂ ಕುಸಿತ: ವಾಹನ ಸವಾರರಿಗೆ ಎಚ್ಚರಿಕೆಯಿಂದಿರಲು ಸೂಚನೆ

Mangaluru: ಕರಾವಳಿ ಮತ್ತು ಮಲೆನಾಡಿನಲ್ಲಿ ವರುಣಾರ್ಭಟ ಜೋರಾಗಿದ್ದು, ಮಂಗಳೂರಿಂದ (Mangaluru) ಬೆಂಗಳೂರು ಸಂಪರ್ಕಿಸುವ ಚಾರ್ಮಾಡಿ ಮತ್ತು ಶಿರಾಡಿ ಘಾಟಡಿಯಲ್ಲಿ ಈ ವರ್ಷವೂ ಭೂಕುಸಿತದ ಭೀತಿ ಎದುರಾಗಿದೆ.

ಸೋಮವಾರ ಚಾರ್ಮಾಡಿ ಘಾಟಿಯ ಬಿದಿರುತಳ ಮತ್ತು ಅಲೆಕಾನ್ ಮಧ್ಯೆ ಭೂಕುಸಿತವಾಗಿ ಹಲವು ತಾಸು ವಾಹನ ಸಂಚಾರಕ್ಕೆ ಅಡಚಣೆಯುಂಟಾಗಿತ್ತು. ಈ ಭಾಗದಲ್ಲಿ ತಡೆಗೋಡೆ ನಿರ್ಮಾಣ ಕಾಮಗಾರಿ ನಡೆಯುತ್ತಿರುವಂತೆಯೇ ಭೂ ಕುಸಿತ ಸಂಭವಿಸಿದೆ.
ವಿಪರೀತ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಚಾರ್ಮಾಡಿ ಮತ್ತು ಶಿರಾಡಿ ಘಾಟಿಯಲ್ಲಿ ಎಚ್ಚರಿಕೆಯಿಂದ ವಾಹನ ಚಲಾಯಿಸಲು ಜಿಲ್ಲಾಡಳಿತಗಳು ಸೂಚನೆ ನೀಡಿವೆ. ಘಾಟಿಗಳಲ್ಲಿ ರಾತ್ರಿ ಹೊತ್ತು ಮಂಜು ಮುಸುಕಿದ ವಾತಾವರಣ ಇರುವುದರಿಂದ ರಸ್ತೆ ಗೋಚರತೆ ಕಡಿಮೆಯಾಗುತ್ತದೆ. ಹೀಗಾಗಿ ಸಾಧ್ಯವಾದಷ್ಟು ರಾತ್ರಿ ಪ್ರಯಾಣವನ್ನು ತಪ್ಪಿಸಬೇಕೆಂದು ಮುನ್ನೆಚ್ಚರಿಕೆ ನೀಡಿದೆ.
Comments are closed.