Heavy Rain: ಕರ್ನಾಟಕದ 6 ಜಿಲ್ಲೆಗಳಿಗೆ ರೆಡ್ ಅಲರ್ಟ್…! ರಾಜ್ಯದಾದ್ಯಂತ ಭಾರಿ ಮಳೆಯ ಮುನ್ಸೂಚನೆ..!

Heavy Rain: ಕರಾವಳಿಗೆ ಮುಂಗಾರು(Mansoon) ಪ್ರವೇಶದಿಂದ ರಾಹ್ಯದಾದ್ಯಂತ ಭಾರಿ ಮಳೆಯಾಗುತ್ತಿದೆ. ಮುಂಗಾರು ಮಳೆ ಆರಂಭವಾಗದ ಎರಡು ದಿನಕ್ಕೆ ಕೆರೆಕಟ್ಟೆಗಳು, ಹಳ್ಳ ಕೊಳ್ಳಗಳು, ಅಣೆಕಟ್ಟುಗಳು(Dam) ತುಂಬಿಕೊಂಡಿವೆ. ಅಲ್ಲಲ್ಲಿ ಅವಘಡಗಳು ಸಂಭವಿಸಿದ್ದು, ಸಾವು ನೋವುಗಳು ಸಂಭವಿಸಿದೆ. ಬಿರುಗಾಳಿ ಸಹಿತ ಮಳೆಯಾಗುತ್ತಿರುವುದರಿಂದ ಗುಡ್ಡಗಳು ಜರಿಯುತ್ತಿತ್ತಿದ್ದು, ರಸ್ತೆಗಳು ಬಂದ್ ಆಗುತ್ತಿವೆ.

ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ಸಾಧಾರಣ ಮಳೆ, ಭಾರಿ ಗಾಳಿ ಉರುವ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಜಾಗ್ರತೆ ವಹಿಸಿ.ಮಕ್ಕಳು, ವಯೋವೃದ್ಧರ ಬಗ್ಗೆ ಕಾಳಜಿ ಇರಲಿ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ರಾಜ್ಯದಲ್ಲಿ ಸುರಿಯುತ್ತಿರುವ ಮಳೆ ಹಿನ್ನೆಲೆ ಕೆಲ ಜಿಲ್ಲೆಗಳಲ್ಲಿ ರೆಡ್ ಅಲರ್ಟ್, ಕೆಲ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಹಾಗೂ ಇನ್ನುಳಿದ ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಿಸಲಾಗಿದೆ.
: ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಕೊಡಗು.
: ಬೆಳಗಾವಿ, ಧಾರವಾಡ.
: ವಿಜಯಪುರ, ಬಾಗಲಕೋಟೆ, ಗದಗ, ಹಾಸನ, ಮಂಡ್ಯ, ಮೈಸೂರು, ಚಾಮರಾಜನಗರ.
ಗುಡುಗು ಸಹಿತ ಧಾರಾಕಾರ ಮಳೆ, 40-60 ಕಿ.ಮೀ/ಗಂಟೆ ವೇಗದ ಗಾಳಿಯ ಸಾಧ್ಯತೆ ಇದೆ.
Comments are closed.