Heavy Rain: ಮಾಲ್ದಾರೆಯಲ್ಲಿ ಗಾಳಿ ಮಳೆಗೆ ಮರದ ಕೊಂಬೆ ಬಿದ್ದು ಕೃಷಿಕ ಸಾವು

Share the Article

Heavy Rain: ವಿರಾಜಪೇಟೆ ತಾಲೂಕಿನ ಮಾಲ್ದಾರೆ ಗ್ರಾಮದಲ್ಲಿ ಮಾಜಿ ಗ್ರಾಮ ಪಂಚಾಯಿತಿ ಸದಸ್ಯ ಹಾಗೂ ಕಾಫಿ ಬೆಳೆಗಾರ ಪೊನ್ನಚoಡ ವಿಷ್ಣು ಬೆಳ್ಳಿಯಪ್ಪ( 64) ನವರ ಮೇಲೆ ಮರದ ಕೊಂಬೆ ಬಿದ್ದು ಪಟ್ಟ ಘಟನೆ ಇಂದು ಸಂಭವಿಸಿದೆ.

ಮನೆಯಿಂದ ಹೊರ ಬರುತ್ತಿದ್ದಂತೆ ಮುರಿದು ಬಿದ್ದ ಮರದ ಕೊಂಬೆಯಿಂದ ತಲೆಗೆ ಗಂಭೀರ ಗಾಯಗೊಂಡು ಸಿದ್ದಾಪುರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತ ಪಟ್ಟಿದ್ದಾರೆ. ಸ್ಥಳಕ್ಕೆ ಪೊಲೀಸ್ ಹಾಗು ಅರಣ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Comments are closed.