School Open: ನಾಳೆ ಶಾಲೆ ಪ್ರಾರಂಭ – ಮೊದಲ ದಿನವೇ ಮಕ್ಕಳಿಗೆ ಮೊಟ್ಟೆ ವಿತರಣೆ!!


School Open: ಬೇಸಿಗೆ ರಜೆ ಮುಗಿದು ನಾಳೆಯಿಂದ ಶಾಲೆ ಆರಂಭವಾಗಲಿದೆ. ಶಾಲೆಗೆ ಬರುವ ವಿದ್ಯಾರ್ಥಿಗಳನ್ನು ಸ್ವಾಗತಿಸಲು ಶಿಕ್ಷಕರು ಸಜ್ಜಾಗಿದ್ದಾರೆ. ಇತ್ತ ಶಿಕ್ಷಣ ಇಲಾಖೆಯ ಕೂಡ ಮೊದಲ ದಿನವೇ ಮಕ್ಕಳಿಗೆ ಮೊಟ್ಟೆ ವಿತರಣೆ ಮಾಡಲು ಆದೇಶ ನೀಡಿದೆ.
ಹೌದು, ಬೇಸಿಗೆ ರಜೆ ಮುಗಿದು ಮೇ 29 ರಿಂದ ಶಾಲೆಗಳು ಪುನರಾರಂಭವಾಗುತ್ತಿದೆ. ಹೀಗಾಗಿ ಶಿಕ್ಷಕರು, ಮುಖ್ಯಶಿಕ್ಷಕರು ಮತ್ತು ಇತರೆ ಸಿಬ್ಬಂದಿ ಮೇ 29ರಂದು ರಾಜ್ಯದ ಎಲ್ಲ ಪ್ರಾಥಮಿಕ, ಪ್ರೌಢಶಾಲೆಗಳಿಗೆ ಹಾಜರಾಗಬೇಕು. ಶಾಲಾ ಆವರಣ, ಕೊಠಡಿಗಳು, ಶೌಚಾಲಯ, ಮೇಲ್ಚಾವಣಿ ಹಾಗೂ ಬಿಸಿಯೂಟದ ಪರಿಕರಗಳನ್ನು ಸ್ವಚ್ಛಗೊಳಿಸಬೇಕು. ತಳಿರು ತೋರಣ, ರಂಗೋಲಿ ಬಿಡಿಸಿ ಶಾಲೆಗಳನ್ನು ಅಲಂಕರಿಸಬೇಕು. ಮೇ 30ರಂದು ಮಕ್ಕಳನ್ನು ಸ್ವಾಗತಿಸಲು ಎಲ್ಲ ಶಾಲೆಗಳು ಸಜ್ಜುಗೊಳ್ಳಬೇಕು ಎಂದು ಶಾಲಾ ಶಿಕ್ಷಣ ಇಲಾಖೆ ಸೂಚಿಸಿದೆ.
ಅಲ್ಲದೆ ಬಿಸಿಯೂಟಕ್ಕೆ ಅಗತ್ಯವಾದ ಪಡಿತರ, ಬೇಳೆ, ತರಕಾರಿ, ಮೊಟ್ಟೆ ತಂದಿಟ್ಟುಕೊಳ್ಳಬೇಕು. ಶುದ್ಧ ಕುಡಿಯುವ ನೀರು ಸಂಗ್ರಹಿಸಬೇಕು. ಅಡುಗೆ ಸಿಬ್ಬಂದಿ, ಸಹಾಯಕ ಆರೋಗ್ಯ ತಪಾಸಣೆ ನಡೆಸಬೇಕು. ಸಿಹಿಯೂಟದ ಜತೆಗೆ ಮೊದಲ ದಿನವೇ ಬೇಯಿಸಿದ ಮೊಟ್ಟೆ ವಿತರಣೆ ಮಾಡಬೇಕು ಎಂದು ಸುತ್ತೋಲೆ ಹೊರಡಿಸಲಾಗಿದೆ.
ಇನ್ನು ಬೆಂಗಳೂರಿನ ಹೊಸೂರು ರಸ್ತೆಯ ಆಡುಗೋಡಿಯ ಪಟೇಲ್ ಮುನಿಚಿನ್ನಪ್ಪ ಪ್ರೌಢಶಾಲೆ- ಕರ್ನಾಟಕ ಪಬ್ಲಿಕ್ ಶಾಲೆ ಆವರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳಿಗ್ಗೆ 9ಕ್ಕೆ ಪ್ರಾರಂಭೋತ್ಸವ ಉದ್ಘಾಟಿಸಲಿದ್ದಾರೆ. ಈ ಬಾರಿಯ ಎಸ್ಎಸ್ಎಲ್ಸಿಯಲ್ಲಿ 625ಕ್ಕೆ 625 ಅಂಕ ಪಡೆದ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಯ 40 ವಿದ್ಯಾರ್ಥಿಗಳನ್ನು ಸನ್ಮಾನಿಸಲಾಗುತ್ತಿದೆ.
Comments are closed.