Bantwala: ರಹೀಮ್‌ ಹತ್ಯೆ ಖಂಡಿಸಿ ದ.ಕ.ಜಿಲ್ಲಾ ಕಾಂಗ್ರೆಸ್‌ನ ಮುಸ್ಲಿಂ ಮುಖಂಡರಿಂದ ಸಾಮೂಹಿಕ ರಾಜೀನಾಮೆ

Share the Article

Puttur: ಅಬ್ದುಲ್‌ ರಹಿಮಾನ್‌ ಹತ್ಯೆಯನ್ನು ಖಂಡನೆ ಮಾಡಿ ರಾಜ್ಯ ಸರಕಾರದ ಧೋರಣೆಯನ್ನು ಖಂಡಿಸಿ ಕಾಂಗ್ರೆಸ್‌ ಅಧೀನದ ವಿವಿಧ ಘಟಕಗಳಿಗೆ ಮುಸ್ಲಿಂ ಮುಖಂಡರು ರಾಜೀನಾಮೆ ನೀಡಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು.

ಪುತ್ತೂರು ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಘಟಕದ ಉಪಾಧ್ಯಕ್ಷ ಸ್ಥಾನಕ್ಕೆ ಬಾತಿಶ್ ಅಳಕೆಮಜಲು, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಅಧ್ಯಕ್ಷ ಸ್ಥಾನಕ್ಕೆ ಉಬೈದುಲ್ಲಾ ಕೊಳಕೆ, ವಿಟ್ಲ ಉಪ್ಪಿನಂಗಡಿ ಕಾಂಗ್ರೆಸ್ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸಮದ್ ವಿಟ್ಲ, ಉಳ್ಳಾಲ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಶಮೀ‌ರ್, NSUI ಬೆಳ್ತಂಗಡಿ ಉಪಾಧ್ಯಕ್ಷ ಸ್ಥಾನಕ್ಕೆ ಸಲ್ಮಾನ್ ಫಾರೀಶ್, ಬೆಳ್ತಂಗಡಿ ಯುವ ಕಾಂಗ್ರೆಸ್‌ ಅಧ್ಯಕ್ಷ ಅನ್ಸಾಫ್ ಕರಾಯ, ವಿಟ್ಲ ಉಪ್ಪಿನಂಗಡಿ ಕಾಂಗ್ರೆಸ್ ಉಪಾಧ್ಯಕ್ಷ ಸ್ಥಾನಕ್ಕೆ ಉನೈಸ್ ಗಡಿಯಾರ ಸಹಿತ ಕಾಂಗ್ರೆಸ್ ನ ವಿವಿಧ ಘಟಕಗಳ ವಿವಿಧ ಹುದ್ದೆಗಳಿಗೆ ರಾಜೀನಾಮೆ ನೀಟಿ ಮುಸ್ಲಿಂ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸುಮಾರು ಹತ್ತರಷ್ಟು ನಾಯಕರು ಈಗಾಗಲೇ ರಾಜೀನಾಮೆ ನೀಡಿರುವ ಕುರಿತು ವರದಿಯಾಗಿದೆ. ಈ ಸಂಖ್ಯೆ ಮತ್ತಷ್ಟು ಹೆಚ್ಚುವ ಸಾಧ್ಯತೆಯಿದೆ. ದ.ಕ.ಜಿಲ್ಲೆಯಲ್ಲಿ ಈ ಬೆಳವಣಿಗೆ ಕಾಂಗ್ರೆಸ್‌ಗೆ ಭಾರೀ ಹೊಡೆತ ನೀಡಲಿದೆ ಎನ್ನಬಹುದು.

 

Comments are closed.