Hassan: ಅಂತಿಮ ವರ್ಷದ ಪದವಿ ವಿದ್ಯಾರ್ಥಿನಿ ಹೃದಯಾಘಾತದಿಂದ ನಿಧನ

Hassan: ಅಂತಿಮ ವರ್ಷದ ಪದವಿ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಹಾಸನ ತಾಲೂಕಿನ ಕೆಲವತ್ತಿ ಗ್ರಾಮದಲ್ಲಿ ನಡೆದಿದೆ. ಕವನ ಕೆ.ವಿ (21) ಮೃತ ವಿದ್ಯಾರ್ಥಿನಿ.

ಹಾಸನ ನಗರದ ಎಂ.ಜಿ.ರಸ್ತೆಯಲ್ಲಿರುವ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತಿಮ ವರ್ಷದ ಬಿ.ಕಾಂ. ವ್ಯಾಸಂಗ ಮಾಡುತ್ತಿದ್ದ ಈಕೆ ಮೂರು ವಿಷಯಗಳ ಪರೀಕ್ಷೆ ಬರೆಯಬೇಕಿತ್ತು. ಸಂಜೆ ಮನೆಗೆ ನೀರು ತಂದ ಕವನಗೆ ದಿಢೀರ್ ಎದೆನೋವು ಕಾಣಿಸಿದೆ.
ಈ ವೇಳೆ ಕವನ ತಾಯಿ ಬಳಿ ಕುಡಿಯಲು ನೀರು ಕೇಳಿದ್ದಾಳೆ. ತಾಯಿ ನೀರು ತಂದು ಕೊಡುವಷ್ಟರಲ್ಲಿ ಕವನ ಮನೆಯಲ್ಲಿಯೇ ಕುಸಿದು ಬಿದ್ದಿದ್ದಳು. ಕೂಡಲೇ ಆಕೆಯ ಪೋಷಕರು ಹಾಸನದ ಖಾಸಗಿ ಆಸ್ಪತ್ರೆಗೆ ಕರೆ ತಂದಿದ್ದಾರೆ. ಆದರೆ ಕವನ ಅಷ್ಟರಲ್ಲಿ ಕೊನೆಯುಸಿರೆಳೆದಿದ್ದಾಳೆ.
Comments are closed.