Home Crime Madikeri: ಕಾಲೇಜು ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ

Madikeri: ಕಾಲೇಜು ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ

Hindu neighbor gifts plot of land

Hindu neighbour gifts land to Muslim journalist

Madikeri: ರಾಯಚೂರು ಮೂಲದ ವಿದ್ಯಾರ್ಥಿನಿ ಕಾಲೇಜು ಹಾಸ್ಟೆಲ್‌ನಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊಡಗು ಜಿಲ್ಲೆಯ ಪೊನ್ನಂಪೇಟೆಯಲ್ಲಿ ನಡೆದಿದೆ.

ತೇಜಸ್ವಿನಿ (19) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ

6 ಸಬ್ಜೆಕ್ಟ್‌ ಬ್ಯಾಕ್‌ಲಾಗ್‌ ಇರುವ ಕಾರಣ ತನಗೆ ಮುಂದೆ ಓದಲು ಇಷ್ಟವಿಲ್ಲದ ಕಾರಣ ಆತ್ಮಹತ್ಯೆ ಮಾಡಿಕೊಂಡಿದ್ದೇನೆ ಎಂದು ಡೆತ್‌ನೋಟ್‌ನಲ್ಲಿ ಬರೆಯಲಾಗಿದೆ.

ಮೂರು ದಿನಗಳ ಹಿಂದೆ ತನ್ನ ಹುಟ್ಟುಹಬ್ಬ ಆಚರಿಸಿಕೊಂಡಿದ್ದ ಈಕೆ ಅಂದು ಬಾರದವರಿಗೆ ಇಂದು ಸಿಹಿ ಹಂಚಿದ್ದಳು. ಇಂದು ಕೂಡಾ ತರಗತಿಗೆ ಬಂದಿದು, ಸಂಜೆ 4 ಗಂಟೆಗೆ ಹಾಸ್ಟೆಲ್‌ಗೆ ಹೋಗಿದ್ದಾಳೆ. ಸಂಜೆ 4.30 ರ ಸುಮಾರಿಗೆ ಆಕೆಯ ಸಹಪಾಠಿ ಕೊಠಡಿಗೆ ಹೋದಾಗ ಒಳಗಿನಿಂದ ಬಾಗಿಲು ಹಾಕಲಾಗಿತ್ತು. ಎಷ್ಟೇ ಬಡಿದರೂ, ಕೂಗಿದೂ ಬಾಗಿಲು ತೆಗೆಯದ ಕಾರಣ, ಮೇಲ್ವಿಚಾರಕರಿಗೆ ವಿಷಯ ತಿಳಿಸಲಾಗಿದೆ. ನಂತರ ಬಾಗಿಲು ತೆಗೆದು ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ತಿಳಿದು ಬಂದಿದೆ.

ಪೊನ್ನಂಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.