Karanataka: ಕರ್ನಾಟಕದಲ್ಲಿ ಕಮಲ್ ಹಾಸನ್ ಸಿನಿಮಾಗಳು ಬ್ಯಾನ್: ಸಚಿವ ಶಿವರಾಜ್ ತಂಗಡಗಿ ಪತ್ರ

Share the Article

Karnataka: ಕನ್ನಡ ಹುಟ್ಟಿದ್ದು ತಮಿಳಿನಿಂದ ಎಂದು ಹೇಳಿಕೆ ನೀಡಿರುವ ನಟ ಕಮಲ್ ಹಾಸನ್ ಅವರ ಸಿನಿಮಾಗಳನ್ನು ಕರ್ನಾಟಕದಲ್ಲಿ (Karnataka)ನಿಷೇಧಿಸುವಂತೆ ವಾಣಿಜ್ಯ ಮಂಡಳಿಗೆ ಪತ್ರ ಬರೆಯಲಾಗುವುದು ಎಂದು ಸಚಿವ ಶಿವರಾಜ್ ತಂಗಡಗಿ ಹೇಳಿದ್ದಾರೆ.

ಈ ಕುರಿತು ಮಾತನಾಡಿರುವ ಶಿವರಾಜ್ ತಂಗಡಗಿ ಅವರು, ಕನ್ನಡದ ನೆಲ, ಜಲ, ಭಾಷೆ ವಿಚಾರದಲ್ಲಿ ಯಾವುದೇ ದೊಡ್ಡ ವ್ಯಕ್ತಿ ಇದ್ದರೂ ಅದನ್ನು ಸಹಿಸುವ ಪ್ರಶ್ನೆಯೇ ಇಲ್ಲ. ಕಮಲ್ ಹಾಸನ್ ಅವರು ಕೂಡಲೇ ರಾಜ್ಯದ ಜನರ ಕ್ಷಮೆಯಾಚಿಸಬೇಕು. ಕನ್ನಡದ ಹಲವು ಚಿತ್ರಗಳಲ್ಲಿ ಕಮಲ್‌ ಹಾಸನ್‌ ಅವರು ನಟನೆ ಮಾಡಿದ್ದಾರೆ. ಓರ್ವ ಹಿರಿಯ ನಟ ಈ ರೀತಿ ಹೇಳಿಕೆ ನೀಡುವುದು ಸರಿಯಲ್ಲ. ಅವರ ಚಿತ್ರಗಳಿಗೆ ರಾಜ್ಯದಲ್ಲಿ ಬಿಡುಗಡೆಗೆ ನಿಷೇಧ ಏರುವಂತೆ ಚಲನಚಿತ್ರ ವಾಣಿಜ್ಯ ಮಂಡಳಿಗೆ ಪತ್ರ ಬರೆಯಲಾವುದು.

ನಟನೆ ಮಾಡಲು ಹಾಗೂ ಹಣ ಸಂಪಾದನೆ ಮಾಡಲು ನಮ್ಮ ಭಾಷೆ ಬೇಕು. ಇದೀಗ ಪುಕ್ಕಟೆ ಪ್ರಚಾರಕ್ಕೆ ಮಾತನಾಡುವುದೇ ? ಈ ಹಿಂದೆ ಸೋನು ನಿಗಮ್‌ಗೆ ಅವರು ಇದೇ ರೀತಿ ಕನ್ನಡಿಗರ ಬಗ್ಗೆ ಮಾತನಾಡಿ, ಬಳಿಕ ಎಚ್ಚೆತ್ತು ಕ್ಷಮೆಯಾಚಿಸಿದ್ದಾರೆ. ಇವರಿಗೆಲ್ಲ ಪಾಠ ಕಲಿಸುವ ಅಗತ್ಯವಿದೆ ಎಂದಿದ್ದಾರೆ.

Comments are closed.