Kamal haasan: ಕಮಲ್ ಹಾಸನ್ ಪೋಸ್ಟರ್ ಗೆ ಬೆಂಕಿಯಿಕ್ಕಿದವರ ವಿರುದ್ಧ ಎಫ್‌ಐಆ‌ರ್!

Share the Article

Kamal haasan: ಕನ್ನಡದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದಕ್ಕೆ ನಟ ಕಮಲ್ ಹಾಸನ್ (Kamal haasan) ಭಾವಚಿತ್ರಕ್ಕೆ ಬೆಂಕಿ ಹಾಕಿ ಸುಡುವ ಮೂಲಕ ಆಕ್ರೋಶ ಹೊರಹಾಕಿದ್ದ ಕನ್ನಡ ಪರ ಸಂಘಟನೆಯ ಇಬ್ಬರು ಕಾರ್ಯಕರ್ತರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

ಕಮಲ್ ಹಾಸನ್ ಥಗ್ ಲೈಫ್ ಸಿನಿಮಾದ ಪ್ರಚಾರಕ್ಕಾಗಿ ಚಿತ್ರತಂಡ ಬೆಂಗಳೂರಿಗೆ ಬಂದಿದ್ದ ವೇಳೆ ಪ್ರಚಾರದ ಭರದಲ್ಲಿ ಕನ್ನಡ ಹುಟ್ಟಿದ್ದು ತಮಿಳಿನಿಂದ ಎಂಬ ಹೇಳಿಕೆ ನೀಡಿದ್ದರು. ನಟನ ಈ ಹೇಳಿಕೆ ರಾಜ್ಯದಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಅಲ್ಲದೇ ಕಮಲ್ ಹಾಸನ್ ಅವರ ಈ ಹೇಳಿಕೆ ಖಂಡಿಸಿ ಕನ್ನಡ ಪರ ಸಂಘಟನೆಯ ಕಾರ್ಯಕರ್ತರು ಬಸವೇಶ್ವರ ನಗರದ ಪವಿತ್ರ ಪ್ಯಾರಡೈಸ್ ಬಳಿ ನಟನ ಭಾವಚಿತ್ರಕ್ಕೆ ಬೆಂಕಿ ಹಾಕಿ ಪ್ರತಿಭಟಿಸಿದ್ದರು.

ಇದೀಗ ಪೊಲೀಸರ ಅನುಮತಿ ಇಲ್ಲದೆ ರಸ್ತೆಯಲ್ಲಿ ಬೆಂಕಿ ಹಾಕಿದ ಆರೋಪಕ್ಕೆ ಕಾರ್ಯಕರ್ತರಾದ ರವಿಕುಮಾರ್ ಹಾಗೂ ಬಸವೇಶ್‌ ವಿರುದ್ಧ ಎಫ್‌ಐಆ‌ರ್ ದಾಖಲಾಗಿದ್ದು, ಸದ್ಯ ಬಸವೇಶ್ವರ ನಗರ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದು, ನೋಟಿಸ್‌ ಕೊಟ್ಟು ಕಳುಹಿಸಿದ್ದಾರೆ.

Comments are closed.