Karnataka Gvt: ಅತಿಥಿ ಉಪನ್ಯಾಸಕರಿಗೆ 5 ಲಕ್ಷ ಇಡುಗಂಟು ಘೋಷಿಸಿದ ರಾಜ್ಯ ಸರ್ಕಾರ!!

Karnataka Gvt: ಕರ್ನಾಟಕ ಸರ್ಕಾರವು ರಾಜ್ಯದ ಪ್ರಥಮ ದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕರಿಗೆ ಭರ್ಜರಿ ಗುಡ್ ನ್ಯೂಸ್ ಎಂದು ನೀಡಿದೆ. ಅದೇನೆಂದರೆ ಅತಿಥಿ ಉಪನ್ಯಾಸಕರುಗಳಿಗೆ 5 ಲಕ್ಷ ರೂ. ಇಡುಗಂಟು ನೀಡಲು ಸರಕಾರ ಅಧಿಕೃತ ಆದೇಶ ಹೊರಡಿಸಿದೆ.

ಹೌದು, ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿ 60 ವರ್ಷ ಪೂರೈಸಿದ ಮತ್ತು ಮರಣ ಹೊಂದಿದ ಅತಿಥಿ ಉಪನ್ಯಾಸಕರಿಗೆ 5 ಲಕ್ಷ ರೂ. ಇಡುಗಂಟು ನೀಡಲು ಸರಕಾರ ಅಧಿಕೃತ ಆದೇಶ ಹೊರಡಿಸಿದೆ.
ಸರ್ಕಾರದ ಈ ಯೋಜನೆಯು 2024 ಜನವರಿ 1ರಿಂದ ಜಾರಿಗೆ ಬರಲಿದ್ದು, ಕನಿಷ್ಠ ಒಂದು ವರ್ಷ ಸೇವೆ ಸಲ್ಲಿಸಿ ನಿವೃತ್ತರಾಗಿರುವ ಅಥವಾ ಮರಣ ಹೊಂದಿರುವ ಎಲ್ಲಾ ಅತಿಥಿ ಉಪನ್ಯಾಸಕರಿಗೂ ಇಡು ಗಂಟು ಯೋಜನೆ ಅನ್ವಯಿಸಲಿದೆ ಎಂದು ಸರ್ಕಾರ ತಿಳಿಸಿದೆ. ಈ ಯೋಜನೆಗೆ ಒಟ್ಟಾರೆ 44.15 ಕೋಟಿ ರೂಪಾಯಿಗಳನ್ನು ಸರಕಾರ ಕಾಯ್ದಿರಿಸಿ ಆದೇಶ ಹೊರಡಿಸಿದೆ.
ಅಂದಹಾಗೆ ಯೋಜನೆ ಅನುಷ್ಠಾನಕ್ಕೆ ಬಂದ ಹಿಂದಿನ ಐದು ವರ್ಷಗಳಲ್ಲಿ ಕನಿಷ್ಠ ಒಂದು ವರ್ಷ ಸೇವೆ ಸಲ್ಲಿಸಿ 60 ವರ್ಷ ಪೂರ್ಣಗೊಳಿಸಿರುವ ಅತಿಥಿ ಉಪನ್ಯಾಸಕರಿಗೂ ಈ ಯೋಜನೆಗೆ ಒಳಪಡಲಿದ್ದಾರೆ. ಆದ್ರೆ ಇಡುಗಂಟು ಸೌಲಭ್ಯವನ್ನು ಕ್ಲೇಮ್ ಮಾಡುವ ಅತಿಥಿ ಉಪನ್ಯಾಸಕರು ಸರಕಾರ ಅಥವಾ ಸರಕಾರದ ಅನುದಾನಕ್ಕೊಳಪಟ್ಟ ಸಂಸ್ಥೆಗಳಲ್ಲಿ ನೇಮಕಾತಿ ಹೊಂದಿ ಸೇವೆ ಸಲ್ಲಿಸಿದ್ದಲ್ಲಿ ಅಂತಹ ಅತಿಥಿ ಉಪನ್ಯಾಸಕರಿಗೆ ಈ ಇಡಿಗಂಟು ಯೋಜನೆಯು ಅನ್ವಯವಾಗುವುದಿಲ್ಲ ಎಂದೂ ಸರ್ಕಾರ ಹೇಳಿದೆ
Comments are closed.