Death: ಸಾಂಬಾರ್‌ ವಿಚಾರಕ್ಕೆ ದಂಪತಿ ನಡುವೆ ಗಲಾಟೆ: ಪತ್ನಿ ಸಾವಿನಲ್ಲಿ ಕೊನೆ

Share the Article

Death: ಸಾಂಬಾರ್‌ ವಿಚಾರಕ್ಕೆ ಗಂಡ ಹೆಂಡತಿ ನಡುವೆ ಉಂಟಾದ ಜಗಳ ಕೊನೆಗೆ ಪತ್ನಿ ಸಾವಿನಲ್ಲಿ ಅಂತ್ಯವಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಸಾವಕನಹಳ್ಳಿ ಗ್ರಾಮದಲ್ಲಿ ನಡೆದಿದೆ.

ನಾಗರತ್ನ (38) ಸಾವನ್ನಪ್ಪಿದ್ದ ಮಹಿಳೆ. ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿದೆ. ವಿಶ್ವನಾಥಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನನ್ನ ಮಗಳದ್ದು ಆತ್ಮಹತ್ಯೆಯಲ್ಲ. ಕೊಲೆ ಎಂದು ಮಹಿಳೆಯ ತವರು ಮನೆಯವರು ಆರೋಪ ಮಾಡಿದ್ದಾರೆ. ಹಣಕಾಸಿನ ವಿಚಾರಕ್ಕೆ ಗಂಡ ಕೊಲೆ ಮಾಡಿದ್ದಾನೆ ಎಂದು ಮೃತಳ ಅಣ್ಣ ಮತ್ತು ತಾಯಿ ಆರೋಪ ಮಾಡಿ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ. ಆದರೆ ಇನ್ನೊಂದು ಕಡೆ ಸಾಂಬಾರ್‌ ವಿಚಾರಕ್ಕೆ ಗಲಾಟೆ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಗಂಡ ಮಕ್ಕಳು ಹೇಳುತ್ತಿದ್ದಾರೆ ಎಂದು ವರದಿಯಾಗಿದೆ.

Comments are closed.