Hookah Bars Ban In Karnataka: ಇನ್ಮುಂದೆ ಸಾರ್ವಜನಿಕ ಸ್ಥಳದಲ್ಲಿ ಗುಟ್ಕಾ ಉಗುಳುವುದು, ಸಿಗರೇಟ್ ಸೇದಿದ್ರೆ ಬೀಳುತ್ತೆ ಭಾರೀ ದಂಡ

Bengaluru: ಕರ್ನಾಟಕ ರಾಜ್ಯಾದ್ಯಂತ ಹುಕ್ಕಾ ಬಾರ್ ತೆರೆಯುವುದು ಅಥವಾ ನಡೆಸುವುದನ್ನು ನಿಷೇಧಿಸಿ ಸರ್ಕಾರವು ಗೆಜೆಟ್ ನೋಟಿಫಿಕೇಷನ್ ಹೊರಡಿಸಿದ್ದು, 21 ವರ್ಷಗಳಿಗಿಂತ ಕಡಿಮೆ ವಯಸ್ಸಿನವರಿಗೆ ಸಿಗರೇಟ್ ಮಾರಾಟ ಹಾಗೂ ಹುಕ್ಕಾ ಬಾರ್ ನಿಷೇಧಿಸುವ ಮಸೂದೆಗೆ ರಾಷ್ಟ್ರಪತಿಗಳು ಅಂಕಿತ ಹಾಕಿದ್ದಾರೆ.

ಹಾಗೂ ಇದೀಗ ಸಿಗರೇಟುಗಳ ಮತ್ತು ಇತರ ತಂಬಾಕು ಉತ್ಪನ್ನಗಳ ಅಧಿನಿಯಮ 2024 ಜಾರಿ ಮಾಡಿ ಗೆಜಟ್ ನೋಟಿಫಿಕೇಷನ್ ಹೊರಡಿಸಿದ್ದು, ಇದರೊಂದಿಗೆ ಸಾರ್ವಜನಿಕವಾಗಿ ಗುಟ್ಕಾ ತಿಂದು ಉಳಿದರೆ ಹಾಗೂ ಸಿಗರೇಟ್ ಸೇದಿದರೆ ದಂಡದ ಪ್ರಮಾನ ನಾಲ್ಕು ಪಟ್ಟು ಹೆಚ್ಚಳವಾಗಿದೆ. ಇನ್ನು ಮುಂದೆ ರಾಜ್ಯದಲ್ಲಿ 21 ವಯೋಮಿತಿ ಒಳಗಿನ ವ್ಯಕ್ತಿಗಳಿಗೆ ಸಿಗರೇಟು, ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವಂತಿಲ್ಲ ಹಾಗೂ ಸದ್ಯ ತಂಬಾಕು ಉತ್ಪನ್ನಗಳನ್ನು ಖರೀದಿಸುವುದಕ್ಕೆ ಕನಿಷ್ಠ ವಯೋಮಾನ 18 ಇದ್ದು, ಅದನ್ನು 21 ವರ್ಷಕ್ಕೆ ಏರಿಕೆ ಮಾಡಲಾಗಿದೆ. ಯಾವುದೇ ಶಿಕ್ಷಣ ಸಂಸ್ಥೆಯ 100 ಮೀಟರ್ ಸುತ್ತಳತೆಯೊಳಗಿನ ಪ್ರದೇಶದೊಳಗೆ, ಬಿಡಿಯಾಗಿ ಅಥವಾ ಒಂಟಿ ಕಡ್ಡಿಯಾಗಿ ಸಿಗರೇಟ್ ಮಾರಾಟವನ್ನು ನಿಷೇಧಿಸಲಾಗಿದೆ.
ಹಾಗೂ ಈ ತಿದ್ದುಪಡಿ ಕಾಯ್ದೆ ಪ್ರಕಾರ ಹುಕ್ಕಾ ಬಾರ್ ತೆರೆಯುವುದು ಅಥವಾ ನಡೆಸುವುದಕ್ಕೆ ನಿಷೇಧಿಸಲಾಗಿದೆ. ಯಾರೇ ವ್ಯಕ್ತಿಯು ತಾನಾಗಿಯಾಗಲಿ ಅಥವಾ ಯಾರೇ ಇತರ ವ್ಯಕ್ತಿಯ ಪರವಾಗಿಯಾಗಲಿ ಉಪಹಾರ ಗೃಹ ಅಥವಾ ಪಬ್ ಅಥವಾ ಬಾರು ಅಥವಾ ರೆಸ್ಟೋರೆಂಟ್ ಒಳಗೊಂಡಂತೆ ಯಾವುದೇ ಸ್ಥಳದಲ್ಲಿ ಹುಕ್ಕಾ ಬಾರನ್ನು ತೆರೆಯುವಂತಿಲ್ಲ ಹಾಗೂ ನಡೆಸುವಂತಿಲ್ಲ. ಹಾಗೂ
ಸಾರ್ವಜನಿಕ ಸ್ಥಳದಲ್ಲಿ ಗುಟ್ಕಾ ಉಗುಳುವುದು, ಸಿಗರೇಟು ಸೇದಿ ನಿಯಮ ಉಲ್ಲಂಘಿಸಿದವರಿಗೆ ವಿಧಿಸುವ ದಂಡವನ್ನು 200 ರೂ ಇಂದ 1,000 ರೂ.ಗೆ ಏರಿಕೆ ಮಾಡಲಾಗಿದೆ. ಇನ್ನು ಹುಕ್ಕಾ ಬಾರ್ ನಡೆಸಿ ನಿಯಮ ಉಲ್ಲಂಘಿಸುವವರಿಗೆ 1 ವರ್ಷದಿಂದ 3 ವರ್ಷ ಜೈಲು ಹಾಗೂ 50 ಸಾವಿರ ರೂಪಾಯಿದಿಂದ 1 ಲಕ್ಷ ರೂಪಾಯಿಗಳವರೆಗೆ ದಂಡ ವಿಧಿಸಲಾಗುತ್ತದೆ.
Comments are closed.