Udupi: ಜಸ್ಟಿಸ್ ಎನ್. ಸಂತೋಷ್ ಹೆಗ್ಡೆಯವರಿಗೆ ಪದ್ಮವಿಭೂಷಣ ಜಾರ್ಜ್ ಫೆರ್ನಾಂಡೀಸ್ ಸ್ಮಾರಕ ರಾಷ್ಟ್ರೀಯ ಪ್ರಶಸ್ತಿ – 2025 ಪ್ರದಾನ!

Udupi : ಕರ್ನಾಟಕದ ಕರಾವಳಿಯ ಪ್ರಸಿದ್ದ ಉಭಯ ಜಿಲ್ಲೆಗಳಾದ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆ ಮತ್ತು ಉಡುಪಿ (Udupi) ಜಿಲ್ಲೆಗಳಲ್ಲಿ ಪರಿಸರಕ್ಕೆ ಹಾನಿಯಾಗದಂತೆ ಜಿಲ್ಲೆಗಳ ಪ್ರಗತಿಗೆ ಕಳೆದ 25 ವರ್ಷಗಳಿಂದ ಎಲ್ಲಾ ಸಮುದಾಯದವರನ್ನು ಸೇರಿಸಿ ಹೋರಾಟ ನಡೆಸುತ್ತಾ ಬಂದಿರುವ ಏಕೈಕ ಸರಕಾರೇತರ ಸಂಘಟನೆ ಜಯಶ್ರೀಕೃಷ್ಣ ಪರಿಸರಪ್ರೇಮಿ ಸಮಿತಿಯು ಪ್ರತೀ ವರ್ಷ ಜಾರ್ಜ್ ಫೆರ್ನಾಂಡೀಸ್ ರವರ ಜನ್ಮ ದಿನದ ಸಂದರ್ಭದಲ್ಲಿ ಜಾರ್ಜ್ ಫೆರ್ನಾಂಡೀಸ್ ಸ್ಮಾರಕ ರಾಷ್ಟ್ರೀಯ ಪ್ರಶಸ್ತಿಯನ್ನು ಅರ್ಹ ಸಾಧಕರಿಗೆ ಪ್ರಧಾನಿಸಲಾಗುತ್ತಿದ್ದು ಈ ಸಲ ಕರ್ನಾಟಕದ ಮಾಜಿ ಲೋಕಾಯುಕ್ತರೂ, ಭಾರತದ ಸರ್ವೋಚ್ಛ ನ್ಯಾಯಾಲಯ ಮಾಜಿ ನ್ಯಾಯಾಧೀಶ ಜಸ್ಟಿಸ್ ಎನ್. ಸಂತೋಷ್ ಹೆಗ್ಡೆಯವರಿಗೆ ಪ್ರಧಾನಿಸಲಾಗುವುದು.

ಪ್ರಶಸ್ತಿ ಪ್ರಧಾನ ಸಮಾರಂಭವು ಜೂ. 8ರಂದು ಆದಿತ್ಯವಾರ ಬೆಳಿಗ್ಗೆ 10 ಗಂಟೆಯಿಂದ ಹೋಟೆಲ್ ಓಶಿಯಲ್ ಪರ್ಲ್ ಟೈಮ್ಸ್ ಸ್ಕೊಯರ್ ಬಿಲ್ಡಿಂಗ್, ಕಲ್ಸಂಕ ಉಡುಪಿ ಇಲ್ಲಿ ಅದ್ದೂರಿಯಾಗಿ ನಡೆಯಲಿದೆ.
Comments are closed.