Belagavi: 15 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ: ಇಬ್ಬರು ಆರೋಪಿಗಳು ಅರೆಸ್ಟ್

Belagavi: ಬೆಳಗಾವಿಯಲ್ಲಿ (Belagavi) ಒಂದೇ ವಾರದ ಅಂತರದಲ್ಲಿ ಇನ್ನೊಂದು ಗ್ಯಾಂಗ್ರೇಪ್ ಪ್ರಕರಣ ಸಂಭವಿಸಿದೆ.

ಹದಿನೈದು ವರ್ಷದ ಬಾಲಕಿ ಮೇಲೆ 6 ಜನ ಎರಡೆರಡು ಬಾರಿ ಸಾಮೂಹಿಕ ಅತ್ಯಾಚಾರವೆಸಗಿರುವ ಆಘಾತಕಾರಿ ಘಟನೆ ನಗರದ ಹೊರವಲಯದ ಕಾಕತಿ ಪೊಲೀಸ್ ಠಾಣೆ ವ್ಯಾಪ್ತಿಯ ಗುಡ್ಡದಲ್ಲಿ ನಡೆದಿದೆ.
ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಪೋಕ್ಸ್ ಕಾಯ್ದೆಯಡಿ ಎಫ್ಐಆರ್ ದಾಖಲಾದ ಬಳಿಕ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಮುಖ ಆರೋಪಿ ಸಹಿತ ಉಳಿದ ನಾಲ್ವರು ತಪ್ಪಿಸಿಕೊಂಡಿದ್ದಾರೆ.
ಆರು ತಿಂಗಳ ಹಿಂದೆ ಸ್ನೇಹಿತ ಬಾಲಕಿಯನ್ನು ಪುಸಲಾಯಿಸಿ ಗುಡ್ಡಕ್ಕೆ ಕರೆದೊಯ್ದಿದ್ದು, ಅಲ್ಲಿ 6 ಮಂದಿ ಅತ್ಯಾಚಾರ ಎಸಗಿ ವಿಡಿಯೋ ಮಾಡಿದ್ದರು. ಬಳಿಕ ಆ ವಿಡಿಯೋ ಇಟ್ಟುಕೊಂಡು ಬ್ಲಾಕ್ಮೇಲ್ ಮಾಡಿ ಮತ್ತೊಮ್ಮೆ ಅತ್ಯಾಚಾರ ಮಾಡಿ ವಿಡಿಯೋ ಮಾಡಿದ್ದಾರೆ. ಈ ಕುರಿತು ಇದೀಗ ಬಾಲಕಿ ದೂರು ನೀಡಿದ್ದಾಳೆ.
Comments are closed.