Suicide: ಮದುವೆ ಆಗಿಲ್ಲ ಎಂದು ಜಿಗುಪ್ಸೆ: ಆತ್ಮಹತ್ಯೆಗೆ ಶರಣಾದ ಸೋದರರು!

Share the Article

Suicide: ಮದುವೆ ಆಗದೆ ಜೀವನದಲ್ಲಿ ಜಿಗುಪ್ಪೆ ಗೊಂಡಿದ್ದ ಇಬ್ಬರು ಸಹೋದರರು ವಿಷ ಸೇವಿಸಿ ಆತ್ಮಹತ್ಯೆಗೆ (Suicide) ಶರಣಾಗಿರುವ ಘಟನೆ ಹುಕ್ಕೇರಿ ತಾಲೂಕಿನ ಕೋಣನಕೇರಿ ಗ್ರಾಮದಲ್ಲಿ ನಡೆದಿದೆ.

ಸಂತೋಷ ರವೀಂದ್ರ ಗುಂಡೆ (55) ಹಾಗೂ ಅಣ್ಣಾಸಾಹೇಬ ರವೀಂದ್ರ ಗುಂಡೆ (50) ಮೃತ ವ್ಯಕ್ತಿಗಳು.

ಈ ಇಬ್ಬರು ಸೋದರರು ಮದುವೆ ಆಗಿರಲಿಲ್ಲ ಎನ್ನುವ ಕಾರಣದಿಂದ ಮದ್ಯಪಾನದ ಚಟಕ್ಕೆ ದಾಸರಾಗಿದ್ದರು. ಮದ್ಯದ ಅಮಲಿನಲ್ಲಿ ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಇವರಿಬ್ಬರನ್ನು ಕೂಡಲೇ ಮಹಾರಾಷ್ಟ್ರದ ಗಡಹಿಂಗ್ಲಜ್ ಪಟ್ಟಣದ ಆಸ್ಪತ್ರೆಗೆ ಚಿಕಿತ್ಸೆ ಗಾಗಿ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಇಬ್ಬರು ಸಹೋದರರು ಮೃತಪಟ್ಟಿದ್ದಾರೆ.

ಈ ಕುರಿತು ಮೃತರ ಸಂಬಂಧಿಕರು ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದು, ಸಂಕೇಶ್ವರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.

Comments are closed.